Bhadravathi

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಬಸ್

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಬಸ್ – bus accident

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಭದ್ರಾವತಿಯಿಂದ ಚನ್ನಗಿರಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಕೂಡ್ಲಿಗೆರೆ ಸಮೀಪ ತಲುಪಿದ ವೇಳೆ ಚಾಲಕನ ನಿಯಂತ್ರಣ ತಪ್ಪಿದೆ. ಬಳಿಕ ಬಸ್ ರಸ್ತೆ ಬದಿಯಲ್ಲಿದ್ದ ಅಡಿಕೆ ತೋಟಕ್ಕೆ ನುಗ್ಗಿದೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ಮಾಹಿತಿ ಲಭ್ಯವಾಗಿದೆ.

ಘಟನೆ ನಡೆದ ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650