HOSANAGARA ; ಅಡಿಕೆ ತೋಟಕ್ಕೆ ಬಂದಿದ್ದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುಣಜೆ ಗ್ರಾಮದಲ್ಲಿ ನಡೆದಿದೆ.
ಎತ್ತಿಗೆ ಭೋಜಪ್ಪಗೌಡರ ಅಡಿಕೆ ತೋಟದ ಕೆಲಸ ಮಾಡುತ್ತಿದ್ದ ವೇಳೆ ಹೆಬ್ಬಾವು ಮಲಗಿರುವುದು ಕಂಡು ಬಂದಿತ್ತು. ವಲಯ ಅರಣ್ಯಾಧಿಕಾರಿ ಮೋಹನ್‌ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಅನಿಲ್, ಸಿಬ್ಬಂದಿ ರಾಘವೇಂದ್ರ, ನವೀನ್, ರಮೇಶ್, ಜಗದೀಶ್ ಅವರ ತಂಡ ಸ್ಥಳಕ್ಕೆ ಧಾವಿಸಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟರು.
ಬೃಹದಾಕಾರದ ಹಾವನ್ನು ರಕ್ಷಣೆ ಮಾಡಲು ಸಿಬ್ಬಂದಿಗಳು ಹರಸಾಹಸ ಪಟ್ಟರು. ಕೆಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಹೆಬ್ಬಾವನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.