RIPPONPETE ; ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ಇಂದು ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಗೆ ಜನಪ್ರತಿನಿಧಿಗಳುನ್ನು ಆಯ್ಕೆ ಮಾಡುವ ಉದ್ದೇಶ ಒಳ್ಳೆಯ ಕೆಲಸ ಮಾಡಿ ಎಂದು. ಆದರೆ ನೌಕರರು ಸಹ ಸಾರ್ವಜನಿಕರಿಗೆ ಒಳ್ಳೆಯ ಕೆಲಸ ಮಾಡಲಿ ಎಂದು ಆಯ್ಕೆ ಮಾಡಿರುತ್ತಾರೆ. ಆದರೆ ಸಾರ್ವಜನಿಕರು ನಿತ್ಯ ಕಛೇರಿಗೆ ಅಲೆಯಬೇಕಾಗಿದೆ. ನೌಕರರಿಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರ ಕೆಲಸವನ್ನು ಮರೆತು ತಮಗೆ ಬೇಕಾದಂತೆ ಆಡಳಿತ ನಡೆಸಬಹುದೆಂಬ ಭಾವನೆಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಇಂತಹ ನೀಚರನ್ನು ವಜಾಗೊಳಿಸಿ ನಿಷ್ಟಾವಂತರಿಗೆ ಕೆಲಸ ಮಾಡಲು ಅವಕಾಶಕ್ಕೆ ಪ್ರೇರಣೆಯಾಗಲಿ ಎಂಬ ಉದ್ಧೇಶದಿಂದಾಗಿ ನಾನು ಗ್ರಾಮ ಪಂಚಾಯ್ತಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರವನ್ನು ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ವಿವರಿಸಿದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.