ಹೊಸನಗರ

ಗ್ರಾಮ ಆಡಳಿತಾಧಿಕಾರಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ; ಕಠಿಣ ಕ್ರಮಕ್ಕೆ ತಹಸೀಲ್ದಾರ್‌ಗೆ ಮನವಿ

ಹೊಸನಗರ : ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕು ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ಕರ್ತವ್ಯನಿರತ ಗ್ರಾಮ ಆಡಳಿತಾಧಿಕಾರಿಯ (ವಿಎ) ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಹೊಸನಗರ ತಾಲ್ಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಮಂಜುನಾಥ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಹೊಸನಗರ ತಹಸೀಲ್ದಾರ್ ಭರತ್‌ರಾಜ್‌ರಿಗೆ ಮನವಿ ಪತ್ರ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now

ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಮಂಜುನಾಥ್‌ ಮಾತನಾಡಿ, ಮೇ 26ರಂದು ಮಾಗಡಿ ತಾಲ್ಲೂಕಿನ ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ನಕಾಶೆ ಕಂಡ ದಾರಿ ತೆರವು ಮಾಡುವ ಸಂದರ್ಭದಲ್ಲಿ ತಾಲ್ಲೂಕು ಸರ್ವೆ ಅಧಿಕಾರಿ ಹಾಗೂ ಗ್ರಾಮ ಸಹಾಯಕರೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಹಡಗಲಿ ಹೊನ್ನಪ್ಪ ಅವರ ಮೇಲೆ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಇದರಿಂದ ಗ್ರಾಮ ಆಡಳಿತಾಧಿಕಾರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಆದ್ದರಿಂದ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಇಂತಹ ಘಟನೆಗಳು ಮರುಕಳಿಸದಂತೆ ಹಾಗೂ ಸರ್ಕಾರಿ ನೌಕರರಿಗೆ ಮುಕ್ತವಾಗಿ ಕಾರ್ಯವಿರ್ವಹಿಸಲು ಅಗತ್ಯ ಕಾನೂನು ಕ್ರಮ ಹಾಗೂ ರಕ್ಷಣೆಯನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿರಾಸ್ಥೇದಾರ್ ಮಂಜುನಾಥ್ ಕಟ್ಟೆ, ಆರ್.ಐ ಆಂಜನೇಯ, ರೇಣುಕಯ್ಯ, ಪ್ರಕಾಶ್, ಸಿದ್ದಪ್ಪ, ಲೋಹಿತ್, ನವೀನ್‌ಕುಮಾರ್ ಹಾಗೂ ತಾಲ್ಲೂಕಿನ ಎಲ್ಲ ಗ್ರಾಮ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]