ಧರ್ಮಸ್ಥಳ ರಕ್ಷಣೆಗೆ ಸಿಡಿದೆದ್ದ ತೀರ್ಥಹಳ್ಳಿ – ಎಪಿಎಂಸಿಯಿಂದ ತಾಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ

Written by Koushik G K

Published on:

ತೀರ್ಥಹಳ್ಳಿ : ಧರ್ಮಸ್ಥಳದಲ್ಲಿ ಶವಗಳನ್ನು ಹೂತ್ತಿದ್ದಾರೆ ಎಂಬ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ, ಶ್ರೀಕ್ಷೇತ್ರದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪಕ್ಕೆ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತೀರ್ಥಹಳ್ಳಿ ಪಟ್ಟಣದಲ್ಲಿ ಇಂದು ಬೃಹತ್ ಪ್ರತಿಭಟನೆ ಜರುಗಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತಾಲೂಕಿನ ಸಾವಿರಾರು ಭಕ್ತರು ಸೇರಿಕೊಂಡು ಎಪಿಎಂಸಿ ಯಾರ್ಡ್‌ನಿಂದ ತಾಲೂಕು ಕಚೇರಿವರೆಗೆ ಬೃಹತ್ ರ‍್ಯಾಲಿಯಲ್ಲಿ ಭಾಗವಹಿಸಿದರು. ಧರ್ಮಸ್ಥಳ ಭಕ್ತಾಧಿಗಳ ವೇದಿಕೆ ವತಿಯಿಂದ ಆಯೋಜಿಸಲಾದ ಈ ಪ್ರತಿಭಟನೆಯಲ್ಲಿ ಭಕ್ತರು, “ಧರ್ಮಸ್ಥಳದ ವಿರುದ್ಧ ಅನ್ಯಾಯವಾಗಬಾರದು, ಪವಿತ್ರ ಕ್ಷೇತ್ರದ ಹೆಸರಿಗೆ ಕಳಂಕ ತರುವ ಕುತಂತ್ರವನ್ನು ತಪ್ಪಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ರ‍್ಯಾಲಿಯ ನಂತರ ತಾಲೂಕು ಕಚೇರಿ ಮುಂಭಾಗ ಬೃಹತ್ ಜನಾಗ್ರಹ ಸಭೆ ನಡೆಯಿತು. ಈ ಸಭೆಯಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ, ಹಿಂದು ಸಂಘಟನೆಯ ಮುಖಂಡ ಸೊಪ್ಪುಗುಡ್ಡೆ ರಾಘವೇಂದ್ರ ಸೇರಿದಂತೆ ಹಲವರು ಭಾಗಿಯಾಗಿ ಪ್ರತಿಭಟನಾಕಾರರಿಗೆ ಬೆಂಬಲ ತಿಳಿಸಿದರು.

ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣವನ್ನು ವಸಂತ್ ಗಿಳಿಯಾರ್ ಮಾಡಲಿದ್ದು, ಧರ್ಮಸ್ಥಳದ ಪಾವಿತ್ರ್ಯವನ್ನು ಕಾಯ್ದುಕೊಳ್ಳಲು ಹಾಗೂ ಅಪಪ್ರಚಾರ ತಡೆಯಲು ಸಂಘಟಿತ ಹೋರಾಟ ಅಗತ್ಯವಿದೆ ಎಂದು ಅವರು ಹೇಳಲಿದ್ದಾರೆ.

Leave a Comment