ಶಿವಮೊಗ್ಗ

ಕಸ್ತೂರಿರಂಗನ್ ವರದಿ ಹೆಸರಿನಲ್ಲಿ ರಾಜಕೀಯ ಕೆಸರೆರಚಾಟ ಬಿಟ್ಟು ಮಲೆನಾಡು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಿ: ತೀ.ನಾ. ಶ್ರೀನಿವಾಸ್

ಕಸ್ತೂರಿರಂಗನ್ ವರದಿ ಹೆಸರಿನಲ್ಲಿ ರಾಜಕೀಯ ಕೆಸರೆರಚಾಟ ನಡೆಸುವುದನ್ನು ಬಿಟ್ಟು, ಮಲೆನಾಡಿನ ರೈತರ ದೀರ್ಘಕಾಲದ ಸಮಸ್ಯೆಗಳಿಗೆ ಸರ್ಕಾರ ಕಾಲಮಿತಿಯಲ್ಲಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮಲೆನಾಡು ರೈತರ ಹೋರಾಟ ಸಮಿತಿಯ ಸಂಚಾಲಕ ತೀ.ನಾ. ಶ್ರೀನಿವಾಸ್ ಆಗ್ರಹಿಸಿದರು.

ಮಲೆನಾಡು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಿ Tee na Shrinivas

ಶಿವಮೊಗ್ಗ: ಕಸ್ತೂರಿರಂಗನ್ ವರದಿ ಹೆಸರಿನಲ್ಲಿ ರಾಜಕೀಯ ಕೆಸರೆರಚಾಟ ನಡೆಸುವುದನ್ನು ಬಿಟ್ಟು, ಮಲೆನಾಡಿನ ರೈತರ ದೀರ್ಘಕಾಲದ ಸಮಸ್ಯೆಗಳಿಗೆ ಸರ್ಕಾರ ಕಾಲಮಿತಿಯಲ್ಲಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮಲೆನಾಡು ರೈತರ ಹೋರಾಟ ಸಮಿತಿಯ ಸಂಚಾಲಕ ತೀ.ನಾ. ಶ್ರೀನಿವಾಸ್ ಆಗ್ರಹಿಸಿದರು.

WhatsApp Group Join Now
Telegram Group Join Now
Instagram Group Join Now

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡಿನ ಭೂಹಕ್ಕು, ಅರಣ್ಯ ಭೂಮಿ ಅತಿಕ್ರಮಣ, ಹಕ್ಕುಪತ್ರ ವಿತರಣೆ, ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿ ಹಾಗೂ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಸರ್ಕಾರ ಸೂಕ್ತ ಕಾನೂನು ಅಥವಾ ಆದೇಶದ ಮೂಲಕ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

2022ರ ವರದಿ ಜಾರಿಗೆ ಕ್ರಮ ಕೈಗೊಳ್ಳಲಿ :

2022ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಮಲೆನಾಡಿನ ಸಮಸ್ಯೆಗಳ ಅಧ್ಯಯನಕ್ಕಾಗಿ ಸಮಿತಿಯೊಂದನ್ನು ರಚಿಸಿದ್ದರು. ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಆರು ಜಿಲ್ಲೆಗಳ ರೈತರ ಸಮಸ್ಯೆಗಳನ್ನು ಅಧ್ಯಯನ ಮಾಡಿದ ಸಮಿತಿ ಸುಮಾರು 200 ಪುಟಗಳ ವರದಿ ಸಿದ್ಧಪಡಿಸಿತ್ತು.

‘ಮಲೆನಾಡು ಜನಾಕ್ರೋಶ’ ಪಾದಯಾತ್ರೆಯ ಬಳಿಕ ನಡೆದ ಸಮಾವೇಶದಲ್ಲಿ ವರದಿಯನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ಹಸ್ತಾಂತರಿಸಲಾಗಿತ್ತು. ಅಧಿಕಾರಕ್ಕೆ ಬಂದ ಬಳಿಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದ್ದರೂ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ವರದಿ ಆಧರಿಸಿ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಶ್ರೀನಿವಾಸ್ ದೂರಿದರು.

ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಆರೋಪ :

ಇದುವರೆಗೆ ರೈತರ ಸಮಸ್ಯೆಗಳ ಕುರಿತು ಪರಿಣಾಮಕಾರಿ ಧ್ವನಿ ಎತ್ತದ ಶಾಸಕರು ಹಾಗೂ ಸಂಸದರು ಇದೀಗ ಕಸ್ತೂರಿರಂಗನ್ ವರದಿಯನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ನಡೆಸುತ್ತಿರುವುದು ನಾಟಕೀಯವಾಗಿದೆ ಎಂದು ಅವರು ಟೀಕಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಶರಾವತಿ ಸಂತ್ರಸ್ತರ ವಿಚಾರದಲ್ಲಿ ಸುಪ್ರೀಂಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವುದನ್ನು ಹೊರತುಪಡಿಸಿ, ಸಮಸ್ಯೆ ಪರಿಹಾರಕ್ಕೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಸುಮಾರು 50 ಸಾವಿರ ರೈತರ ಹಕ್ಕುಪತ್ರ ಅರ್ಜಿಗಳು ವಜಾಗೊಂಡಿದ್ದು, ಹಲವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಈ ವಿಚಾರದಲ್ಲಿ ಹಾಲಿ ಕಾಂಗ್ರೆಸ್ ಸರ್ಕಾರವಾಗಲಿ, ಹಿಂದಿನ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವಾಗಲಿ ರೈತರಿಗೆ ನ್ಯಾಯ ಒದಗಿಸಿಲ್ಲ ಎಂದು ಹೇಳಿದರು.

ಅಧಿವೇಶನದಲ್ಲಿ ಸಮಗ್ರ ಚರ್ಚೆಗೆ ಆಗ್ರಹ :

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಇತ್ತೀಚಿನ ತೀರ್ಥಹಳ್ಳಿ ಭೇಟಿಯ ಸಂದರ್ಭದಲ್ಲಿ ರೈತ ಹೋರಾಟಗಾರರಿಗೆ ತಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಲು ಅವಕಾಶ ನೀಡದಿರುವುದಕ್ಕೆ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದರು.

ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಕಸ್ತೂರಿರಂಗನ್ ವರದಿ ಸೇರಿದಂತೆ ಮಲೆನಾಡಿನ ಭೂಹಕ್ಕು, ಅರಣ್ಯ, ಶರಾವತಿ ಸಂತ್ರಸ್ತರು, ಹಕ್ಕುಪತ್ರ ಹಾಗೂ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಬೇಕು. ಸರ್ಕಾರವು ಕಾಲಮಿತಿಯ ಕಾರ್ಯಕ್ರಮ ರೂಪಿಸಿ ಮಲೆನಾಡಿನ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]