ಹೊಸನಗರ ; ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಅವರ ಮೇಲಿನ ದೌರ್ಜನ್ಯ ತಡೆಗಟ್ಟಬಹುದು ಹಾಗೂ ಸ್ವಾಸ್ತ್ಯ ಸಮಾಜ ನಿರ್ಮಾಣ ಮಾಡಬಹುದು ಎಂದು ಹೊಸನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಆಶಾ ರವೀಂದ್ರ ಹೇಳಿದರು.
ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಾಗೂ ಕಾರಣಗಿರಿಯ ಗ್ರಾಮೀಣ ಭಾಗದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಬೇಕು. ಓರ್ವ ಮಹಿಳೆ ಮೇಲೆ ಎಲ್ಲೇ ದೌರ್ಜನ್ಯ ನಡೆದರೂ ಎಲ್ಲಾ ಮಹಿಳೆಯರು ಸುಮ್ಮನೆ ಕೊರದೇ ಆ ದೌರ್ಜನ್ಯದ ವಿರುದ್ಧ ಹೋರಾಟಕ್ಕೆ ಮುಂದಾಗಬೇಕು. ಹೋರಾಟದ ಮನೋಭಾವ ಎಲ್ಲ ಮಹಿಳೆಯರು ಬೆಳೆಸಿಕೊಳ್ಳಬೇಕು. ಈ ಸಮಾಜದಲ್ಲಿ ಗಂಡು-ಹೆಣ್ಣು ಇಬ್ಬರು ಸಮಾನರು ಉತ್ತಮ ಬಾಂಧವ್ಯ ಮೂಡುವ ವಾತಾವರಣ ಸೃಷ್ಠಿಸಲು ಪೋಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಬೇಕೆಂದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ಸುಮಾ ಸುರೇಶ್ ಮಹಿಳೆಯರ ಸಬಲೀಕರಣ ಆರ್ಥಿಕ ಸಬಲೀಕರಣ ಹಾಗೂ ಅಂಗಾಂಗ ದಾನಗಳ ಬಗ್ಗೆ ಮಾಹಿತಿ ನೀಡಿದರು.
ಈ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ ಮಹಿಳೆಯರನ್ನು ಹಾಗೂ ಜನಪದ ಕಲೆಯಲ್ಲಿ ಗುರುತಿಸುವ ಜೊತೆಗೆ ಡೊಳ್ಳು ಕುಣಿತದಲ್ಲಿ ರಾಷ್ಟ್ರೀಯ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸೇವೆ ಸಲ್ಲಿಸಿದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಗಾಯಿತ್ರಿ ನಾಗರಾಜ್, ಕೃಷ್ಣವೇಣಿ, ಜಿಲ್ಲಾ ಮೊರ್ಚಾದ ಖಜಾಂಚಿ ಪದ್ಮಾ ಸುರೇಶ್, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುಮಾ ಸುರೇಶ್, ಶಶಿಕಲಾ ಆನಂತ್, ಸುಗುಣ, ಸುರೇಶ್, ಸವಿತಾ, ರಾಜೇಶ್ವರಿ, ನಂದಾ ಕುಮಾರಿ, ಮಹಿಳಾ ಮೋರ್ಚಾದ ಎಲ್ಲ ಸದಸ್ಯರು ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.