ರಿಪ್ಪನ್‌ಪೇಟೆ ; ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಶೇ. 94.7 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.
ಕಲಾ ವಿಭಾಗದಲ್ಲಿ ಶೇ. 94.12 ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 94.34 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ. 95.31 ರಷ್ಟು ಫಲಿತಾಂಶ ಪಡೆಯುವುದರೊಂದಿಗೆ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಕಾಲೇಜ್ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಕಲಾ ವಿಭಾಗದಲ್ಲಿ ಎಂ.ಡಿ. ವೀಣಾ (567) ವಾಣಿಜ್ಯ ವಿಭಾಗದಲ್ಲಿ ಹೆಚ್.ಹೆಚ್.ಸೃಜನ್ (558) ವಿಜ್ಞಾನ ವಿಭಾಗದಲ್ಲಿ ಕೆ.ಎಸ್.ನಿರಂಜನ್ (559) ಅಂಕಗಳನ್ನು ಗಳಿಸುವ ಮೂಲಕ ಕಾಲೇಜ್‌ಗೆ ಟಾಪರ್‌ನಲ್ಲಿ ತೇರ್ಗಡೆಯಾಗಿದ್ದಾರೆಂದು ಪ್ರಾಚಾರ್ಯರು ತಿಳಿಸಿದರು.