Ripponpete

ಅಸ್ಪೃಶ್ಯತಾ ಕಳಂಕ ನಿರ್ಮೂಲನೆಗಾಗಿ ಬೀದಿ ನಾಟಕದ ಮೂಲಕ ಜನಜಾಗೃತಿ ; ರಾಘವೇಂದ್ರ ಕೆ.ಎಸ್.

ರಿಪ್ಪನ್‌ಪೇಟೆ ; ದೇಶಕ್ಕೆ ಸ್ವಾತಂತ್ರ್ಯ ಬಂದು ಏಳುವರೆ ದಶಕಗಳಾದರೂ ಅಸ್ಪೃಶ್ಯತೆ ಎಂಬ ಸಾಮಾಜಿಕ ಪಿಡುಗು ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಸಮಾಜದಲ್ಲಿ ಕೆಲವು ಕಡೆ ಈ ಕಳಂಕ ಬೇರುರಿರುವುದು ದುಃಖಕರ ಸಂಗತಿಯಾಗಿದೆ. ಆಸ್ಪಸೃಶ್ಯತೆಯನ್ನು ಬುಡಸಮೇತ ನಿರ್ಮೂಲನೆ ಮಾಡಲು ಸಮಾಜದ ಪ್ರತಿಯೊಬ್ಬರೂ ಕೈ ಜೋಡಿಸಿ ಸರ್ವಾಂಗೀಣ ಸಹಕಾರ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಮೇಲ್ವಿಚಾರಕ ರಾಘವೇಂದ್ರ ಕೆ.ಎಸ್. ಕರೆ ನೀಡಿದರು.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಜಿಲ್ಲಾ ಪಂಚಾಯಿತ್, ಸಮಾಜ ಕಲ್ಯಾಣ ವತಿಯಿಂದ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಹೊಸನಗರ ತಾಲ್ಲೂಕು ಸಂಸ್ಕೃತಿ ಕಲಾತಂಡ ಹುಣಸೋಡು ವತಿಯಿಂದ ನಡೆದ ಬೀದಿ ನಾಟಕ ಪ್ರದರ್ಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಜನಾಂಗದವರ ಮೇಲಿನ ದೌರ್ಜನ್ಯ ತಡೆಗಟ್ಟುವಿಕೆ ಆಸ್ಪೃಶ್ಯತಾ ನಿವಾರಣೆ ಮತ್ತು ಅಭಿವೃದ್ದಿ ಕುರಿತು ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯ ಮೌಲ್ಯಗಳು ಬಲವಾಗಿ ನೆಲೆಯಾಗಬೇಕಾದರೆ ಪ್ರತಿಯೊಬ್ಬರೂ ಜಾತಿ ಮತ ಭೇದ ಭಾವವನ್ನು ತೊರೆದು ಪರಸ್ಪರ ಗೌರವ ಮತ್ತು ಸಹಕಾರದ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಅಸ್ಪೃಶ್ಯತೆ ಮಾನವೀಯತೆಗೆ ವಿರುದ್ಧವಾದ ಅಮಾನವೀಯ ಆಚರಣೆಯಾಗಿದ್ದು ಇದು ಸಂವಿಧಾನಾತ್ಮಕ ಹಕ್ಕುಗಳಿಗೆ ಧಕ್ಕೆ ಉಂಟು ಮಾಡುತ್ತದೆ. ಆದ್ದರಿಂದ ಇದನ್ನು ನಿರ್ಮೂಲನೆ ಮಾಡಲು ಸರ್ಕಾರ ಮಾತ್ರವಲ್ಲ ಸಮಾಜದ ಪ್ರತಿಯೊಂದು ವರ್ಗದ ಜನರು ಜಾಗೃತರಾಗಬೇಕು ಎಂದು ತಿಳಿಸಿದರು.

ಹೊಸನಗರ ತಾಲ್ಲೂಕು ಹುಣಸೋಡು ಸಂಸ್ಕೃತಿ ಕಲಾತಂಡದವರಿಂದ ಬೀದಿ ನಾಟಕ ಪ್ರದರ್ಶನ ಜರುಗಿತು. ಈ ಸಂದರ್ಭದಲ್ಲಿ ಕಲ್ಲೂರು ಈರಪ್ಪ, ಫ್ಯಾನ್ಸಿ ರಮೇಶ್, ಗ್ರಾಮ ಪಂಚಾಯಿತ್ ಬಿಲ್ ಕಲೆಕ್ಟರ್ ನಾಗೇಶ ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!