ಮಾನವ ಕಳ್ಳಸಾಗಣೆ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ ; ಪಿಎಸ್ಐ ರಾಜುರೆಡ್ಡಿ ಬೆನ್ನೂರು

Written by Mahesh Hindlemane

Published on:

ರಿಪ್ಪನ್‌ಪೇಟೆ ; ಮಾನವ ಕಳ್ಳ ಸಾಗಣೆಯಂತಹ ಹೀನಕೃತ್ಯದ ಅಪರಾಧ ಕೃತ್ಯದಿಂದ ಮುಕ್ತಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಕರೆ ನೀಡಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ಐಕ್ಯೂಎಸಿ ಮತ್ತು ಎನ್.ಎಸ್.ಎಸ್. ಘಟಕ ಪೊಲೀಸ್ ಇಲಾಖೆ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದ ಅವರು, ಮಹಿಳೆಯರು ಮಕ್ಕಳು ಅಬಲರಾಗಿದ್ದು ಪ್ರತಿರೋಧ ಒಡ್ಡಲು ಅಸಾಧ್ಯವಾಗಿರುವ ಪರಿಸ್ಥಿತಿಯಲ್ಲಿ ಆಮಿಷವೊಡ್ಡುವ ಮುಖಾಂತರ ಅವರನ್ನು ಕರೆದೊಯ್ದ ಜೀತ ಪದ್ದತಿ ಇಲ್ಲವೆ ಲೈಂಗಿಕ ಶೋಷಣೆಗೆ ಒಳಪಡಿಸುವ ಹೀನಕೃತ್ಯ ನಿರಂತರವಾಗಿ ನಡೆಯುತ್ತಿದೆ. ಅಲ್ಲದೆ ಶಾಲಾ-ಕಾಲೇಜ್ ಬಳಿಯಲ್ಲಿ ಅಕ್ರಮವಾಗಿ ಗಾಂಜಾದಂತಹ ಮತ್ತುಭರಿಸುವ ಮಾಧಕ ವಸ್ತುಗಳ ಮಾರಾಟರಾರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಹತ್ತಿರದ ಠಾಣೆಗೆ ಮಾಹಿತಿ ನೀಡುವಂತೆ ವಿದ್ಯಾರ್ಥಿ ಸಮೂಹಕ್ಕೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಪ್ರೋ.ಹೆಚ್.ಎಸ್.ವಿರೂಪಾಕ್ಷಪ್ಪ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಪ್ರೋ.ರಾಜು ಬಿ.ಎಲ್., ಪ್ರೋ.ರಾಜು ಕೆ.ಆರ್., ಇನ್ನಿತರ ಉಪನ್ಯಾಸಕ ವೃಂದ ಹಾಜರಿದ್ದರು.

Leave a Comment