ರಿಪ್ಪನ್‌ಪೇಟೆ ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುತ್ತಿದ್ದು ಈ ಯೋಜನೆಗೆ ಕೋಟ್ಯಂತರ ಹಣ ಹರಿದು ಬರುತ್ತಿದ್ದರೂ ಕೂಡಾ ಕೆಲವರು ಕಳಪೆ ಗುಣಮಟ್ಟದ ಕಾಮಗಾರಿ ಮಾಡಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಟೆಂಡರ್‌ದಾರರ ವಿರುದ್ದ ಕ್ರಮ ಜರುಗಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಹೆದ್ದಾರಿಪುರ ಗ್ರಾಮ ಪಂಚಾಯ್ತಿ ಹೆದ್ದಾರಿಪುರದಲ್ಲಿ 57 ಲಕ್ಷ ರೂ. ವೆಚ್ಚದ ಜಲಜೀವನ್ ಮಿಷನ್ ಯೋಜನೆಯಡಿ 182 ಮನೆಗೆ ಯೋಜನೆಯ ಪೈಪ್ ಲೈನ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸಾರ್ವಜನಿಕರ ಸಭೆಯನ್ನುದ್ದೇಶಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಕೋಟ್ಯಂತರ ರೂ. ಹಣ ವೆಚ್ಚ ಮಾಡುತ್ತಿದೆ. ಕಾಮಗಾರಿ ಅನುಷ್ಠಾನದಲ್ಲಿ ಆಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಸಮರ್ಪಕವಾಗಿ ಕಾಮಗಾರಿಯತ್ತ ಗಮನಹರಿಸುವ ಮೂಲಕ ಮಾರ್ಚ್ ಅಂತ್ಯದೊಳಗೆ ಜನರಿಗೆ ನೀರಿನ ವ್ಯವಸ್ಥೆ ನೀಡಲು ಸೂಚಿಸಿ ಸಾರ್ವಜನಿಕರು ತಮ್ಮ ಗ್ರಾಮದಲ್ಲಿ ನಡೆಸಲಾಗುತ್ತಿರುವ ಸರ್ಕಾರದ ಯೋಜನೆಯ ಕಾಮಗಾರಿಯ ಗುಣಮಟ್ಟದ ಕುರಿತು ಪ್ರಶ್ನಿಸುವಂತಾಗಬೇಕು. ಆಗ ಕಾಮಗಾರಿಯ ಗುಣಮಟ್ಟ ಸುಧಾರಿಸಲು ಸಾಧ್ಯವೆಂದ ಅವರು, ಕಾಮಗಾರಿ ಕಳಪೆಯೆಂದು ಸಾರ್ವಜನಿಕವಾಗಿ ದೂರುಗಳು ಬಂದರೆ ನಿರ್ದಾಕ್ಷಿಣ್ಯವಾಗಿ ಗುತ್ತಿಗೆದಾರನ ಮತ್ತು ಸಂಬಂಧಿಸಿದ ಇಂಜಿನಿಯರ್ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಹೆದ್ದಾರಿಪುರ ಗ್ರಾಮ ಪಂಚಾಯಿತ್ ಅಧ್ಯಕ್ಷೆ ವಿನಂತಿ ರಾಘವೇಂದ್ರ, ಸದಸ್ಯರಾದ ವನಿತಾ ಗಂಗಾಧರ, ವಿಶುಕುಮಾರ್, ನಾಗರತ್ನ, ಸಂತೋಷ, ಷಣ್ಮುಖ, ಭೀಮರಾಜ್, ಪ್ರವೀಣ್, ಸುಮಿತ್ರಮ್ಮ, ಲೀಲಾವತಿ ಪುಂಡಲೀಕ ಹಾಗೂ ಗ್ರಾಮಸ್ಥರು, ಇಲಾಖೆಯ ಅಧಿಕಾರಿಗಳು ಹಾಗೂ ಪಿಡಿಎ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದರು.