3 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆರ್.ಐ !

Written by Mahesha Hindlemane

Published on:

ಸಾಗರ ; ರೈತರೊಬ್ಬರಿಂದ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3 ಸಾವಿರ ರೂ. ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಆರ್.ಐ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ತಾಲ್ಲೂಕಿನ ತಾಳಗುಪ್ಪ ಹೋಬಳಿಯ ನಾಡ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ನನ್ನು ಲಂಚ ಪಡೆಯುವ ವೇಳೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರ ದಾಳಿ ನಡೆಸಿ ಬಂಧಿಸಿದ್ದಾರೆ. ಎರಡೂವರೆ ಸಾವಿರ ರೂ. ಫೋನ್ ಪೇ ನಲ್ಲಿ ಲಂಚ ಸ್ವೀಕರಿಸಿದ್ದ ಮಂಜುನಾಥ್, ಇಂದು 3 ಸಾವಿರ ರೂ. ನಗದು ಲಂಚ ಪಡೆಯುವ ವೇಳೆ ದಾಳಿ ನಡೆಸಿ ಬಂಧಿಸಿದ್ದಾರೆ.

ಇಂದು ಮಧ್ಯಾಹ್ನ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ಮಂಜುನಾಥ್ ನನ್ನು ವಶಕ್ಕೆ ಪಡೆದು ತಾಲೂಕು ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

Leave a Comment