ಶಿವಮೊಗ್ಗ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಬಂಧನ !

ಶಿವಮೊಗ್ಗ ; ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಇ‌.ಡಿ. ಅಧಿಕಾರಿಗಳು ಬಂಧಿಸಿದ ಘಟನೆ ಬುಧವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ.

ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ. ವಶಕ್ಕೆ ನೀಡಲಾಗಿದೆ. ಬೆಂಗಳೂರಿನ 1ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಮಂಜುನಾಥ ಗೌಡ ಅವರನ್ನು ಹಾಜರುಪಡಿಸಲಾಗಿತ್ತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಎ.8ರ ಮಂಗಳವಾರ ಬೆಳಗ್ಗೆ ಅಪೆಕ್ಸ್‌ ಬ್ಯಾಂಕ್‌ ಅತಿಥಿ ಗೃಹದಲ್ಲಿ ಮಂಜುನಾಥ ಗೌಡ ಅವರಿದ್ದ ಕೊಠಡಿ ಮೇಲೆ ದಾಳಿ ನಡೆಸಿದ್ದ ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಮಂಗಳವಾರ ಸಂಜೆ ಇ.ಡಿ. ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು. ಇಂದು ಮಂಜುನಾಥ ಗೌಡ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಕರಣದ ಹಿನ್ನೆಲೆ :

ಶಿವಮೊಗ್ಗ ನಗರದ ಗಾಂಧಿ ಬಜಾರ್‌ನಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ. ವಂಚನೆ ನಡೆದಿತ್ತು. 2014ರಲ್ಲಿ ಈ ಹಗರಣ ನಡೆದಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು 2014ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಬಳಿಕ ಇಡಿ ಸಹ ಇಸಿಐಆರ್ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡು ಮಂಜುನಾಥ್ ಗೌಡಗೆ ಸಮನ್ಸ್ ಜಾರಿಗೊಳಿಸಿತ್ತು. ಇಡಿ ಸಮನ್ಸ್ ಪ್ರಶ್ನಿಸಿ ಮಂಜುನಾಥ್ ಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನ ಇತ್ತೀಚೆಗೆ ಹೈಕೋರ್ಟ್ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಇಡಿ ಮಂಜುನಾಥ್ ಗೌಡ ಅವರ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು. ಬಳಿಕ ನಿನ್ನೆ ಬೆಂಗಳೂರಿನಲ್ಲಿ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಸಿದ್ದರು. ಆದರೆ, ಇದೀಗ ಮಂಜುನಾಥ್ ಅವರನ್ನು ಇ.ಡಿ ಬಂಧಿಸಿ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದು, ತನಿಖೆಯಲ್ಲಿ ಯಾವೆಲ್ಲಾ ಅಂಶಗಳು ಹೊರಬರಲಿವೆ ಎನ್ನುವುದನ್ನು ಕಾದುನೋಡಬೇಕಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]