SAGARA ; ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯಲ್ಲಿ ನಡೆದಿದೆ.
ತೆಪ್ಪದಲ್ಲಿ ಒಟ್ಟು ಐದು ಯುವಕರು ಪಯಣಿಸುತ್ತಿದ್ದು ರಾಜು, ಸಂದೀಪ್ ಭಟ್ ಮತ್ತು ಚೇತನ್ ನೀರುಪಾಲಾಗಿದ್ದಾರೆ. ನವೀನ್ ಮತ್ತು ಯಶ್ವಂತ್ ಈಜಿಕೊಂಡು ದಡ ಸೇರಿದ್ದಾರೆ.
ಕಣ್ಮರೆಯಾಗಿರುವ ಯುವಕರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಯುತ್ತಿದೆ.
ಹೇಗಾಯ್ತು ಘಟನೆ ?
ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರ ಮೂಲದ ಐವರು ಯುವಕರು ಕಳಸವಳ್ಳಿ ಬದಿಯ ಹಿನ್ನೀರಿಗೆ ತೆರಳಿದ್ದಾರೆ. ಅಲ್ಲಿಯೇ ದಡದಲ್ಲಿದ್ದ ತೆಪ್ಪ ಬಳಸಿ ಹಿನ್ನೀರಿನ ಇನ್ನೊಂದು ಬದಿಗೆ ಹೋಗಿದ್ದಾರೆ. ಅಲ್ಲಿಯೇ ಊಟ ಮಾಡಿದ್ದಾರೆ. ಅಲ್ಲಿಂದ ವಾಪಸ್ ಬರುವಾಗ ತೆಪ್ಪದ ಒಳಗೆ ನೀರು ನುಗ್ಗಲು ಆರಂಭವಾಗಿದೆ. ಪರಿಣಾಮ ತೆಪ್ಪ ಮುಳುಗಿದ್ದು ಆಗ ಐವರ ಪೈಕಿ ಇಬ್ಬರು ಈಜಿಕೊಂಡು ದಡಕ್ಕೆ ಸೇರಿದೇದಾರೆ. ಉಳಿದ ಮೂವರು ನೀರು ಪಾಲಾಗಿದ್ದಾರೆ.
ಇವರ ಪೈಕಿ ಓರ್ವ ಗೇಟ್‌ನಲ್ಲಿ ಕೆಲಸ ಮಾಡುತ್ತಿದ್ದ. ಇನ್ನಿಬ್ಬರು ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ ಮುಳುಗಿದವರಿಗಾಗಿ ಹುಡಕಾಟ ಆರಂಭವಾಗಿದ್ದು, ಕತ್ತಲಾದ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.