ತೆಪ್ಪ ಮುಳುಗಿ ಮೂವರು ಯುವಕರು ನೀರುಪಾಲು !

Written by malnadtimes.com

Updated on:

N.R.Pura | ತೆಪ್ಪ ಮುಳುಗಿ ಮೂವರು ಪ್ರವಾಸಿಗರು ನೀರುಪಾಲಾದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಎನ್‌.ಆರ್. ಪುರ ತಾಲೂಕಿನ ಬೈರಾಪುರ (Bairapura) ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೃತರನ್ನು ಶಿವಮೊಗ್ಗ (Shivamogga) ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ.

Read More:SHIVAMOGGA | ಪೊಲೀಸರಿಂದ ಶಾಲಾ ವಾಹನಗಳ ತಪಾಸಣೆ

ಮಾರಿದಿಬ್ಬ ಬಳಿಯಿಂದ ಹಿನ್ನೀರಿನ ವಿಹಂಗಮ ನೋಟ ಸವಿಯಲು ನಾಲ್ವರು ಯುವಕರು ಒಟ್ಟಿಗೆ ಬಂದಿದ್ದರು. ಇವರ ಪೈಕಿ ಒಬ್ಬರು ದಡದಲ್ಲಿ ಕುಳಿತಿದ್ದರು. ಉಳಿದ ಮೂವರು ಬದಿಯಲ್ಲಿದ್ದ ತೆಪ್ಪ ತೆಗೆದುಕೊಂಡು ಹಿನ್ನೀರಿನೊಳಗೆ ಸ್ವಲ್ಪ ದೂರ ತೆರಳಿದ್ದಾರೆ. ಚಾಲನೆ ಗೊತ್ತಿಲ್ಲದಿದ್ದರಿಂದ ನಿಯಂತ್ರಣ ತಪ್ಪಿ ತೆಪ್ಪ ಪಲ್ಟಿಯಾಗಿ ಮೂವರು ನೀರಿನಲ್ಲಿ ಮುಳುಗಿದ್ದಾರೆ.

‘ಪ್ರಾಥಮಿಕ ಮಾಹಿತಿ ಪ್ರಕಾರ ತೆಪ್ಪದ ಮಾಲೀಕ ಕೂಡ ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಮೃತದೇಹಗಳ ಪತ್ತೆಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ. ಶವ ದೊರೆತ ಬಳಿಕ ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.

ಘಟನೆ ಬಳಿಕ ವನ್ಯಜೀವಿ, ಪೊಲೀಸ್‌ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಸ್ಥಳದಲ್ಲಿ ಮೂವರ ಶವಕ್ಕಾಗಿ ರಾತ್ರಿ 8 ಗಂಟೆ ತನಕ ಶೋಧಕಾರ್ಯ ನಡೆಸಿದ್ದು ಶವಗಳು ಪತ್ತೆಯಾಗಲಿಲ್ಲ. ಗುರುವಾರ ಶೋಧ ಕಾರ್ಯ ಮುಂದುವರೆಯಲಿದೆ. ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More:ಅಪಘಾತಗೊಂಡು ರಸ್ತೆ ಮೇಲೆ ಉರುಳಿ ಬಿದ್ದ ಲಾರಿ, ಸಂಚಾರ ಅಸ್ತವ್ಯಸ್ಥ

Leave a Comment