RIPPONPETE | ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ !
ಹೊಟ್ಯಾಳಪುರ ಗ್ರಾಮದ ಪ್ರಭಾಕರ ಎಂಬುವರ ಮನೆ ಗೋಡೆ ಕುಸಿದಿದೆ. ಮಳೆಯ ರಭಸಕ್ಕೆ ಮನೆಯೊಳಗಿನ ಅಡುಗೆ ಮನೆ ಪಕ್ಕದ ಗೋಡೆ ಕುಸಿದಿದ್ದು, ಸಂಪೂರ್ಣ ಮನೆ ಕುಸಿಯುವ ಹಂತದಲ್ಲಿದೆ. ಈ ಘಟನೆಯಿಂದ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಶಿಥಿಲಾವಸ್ಥೆಯಲ್ಲಿರುವ ಮನೆಯ ಎಲ್ಲಾ ಗೋಡೆಗಳು ಕುಸಿಯುವ ಹಂತದಲ್ಲಿದ್ದೂ ಸಂಬಂಧಪಟ್ಟವರು ಕೂಡಲೇ ಈ ಬಡಕುಟುಂಬಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಮುಂದಾಗುವ ಭಾರಿ ಅನಾಹುತವನ್ನು ತಪ್ಪಿಸಿ ಕುಟುಂಬಕ್ಕೆ ರಕ್ಷಣೆ ನೀಡಲು ಮುಂದಾಗುವರೆ ಕಾದು ನೋಡಬೇಕಾಗಿದೆ.
ಧರೆ ಕುಸಿತ, ಲಕ್ಷಾಂತರ ರೂ. ಬೆಳೆ ನಷ್ಟ !
HOSANAGARA | ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳೂರು ಗ್ರಾಮದ ಸರ್ವೆ ನಂಬರ್ 89ರಲ್ಲಿ ಸೀತಮ್ಮ ಕೋಂ ಭೈರಪ್ಪ ಎಂಬುವರ ಮನೆಯ ಮುಂಭಾಗ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಧರೆ ಕುಸಿತವಾಗಿದ್ದು ಜಮೀನಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ಬೆಳೆ ನಷ್ಟ ಸಂಭವಿಸಿದೆ.
ಪ್ರತಿ ವರ್ಷವೂ ಮಳೆಗಾಲದಲ್ಲಿ ಧರೆ ಕುಸಿತ ಕಾಣುತ್ತಿದ್ದು ಈ ಬಗ್ಗೆ ಸಾಕಷ್ಟು ಅರ್ಜಿಯನ್ನು ಕಂದಾಯ ಇಲಾಖೆಗೆ ಸಲ್ಲಿಸಲಾಗಿದೆ. ಆದರೆ ಇಲ್ಲಿಯವರೆಗೆ ನೆರೆ ಪರಿಹಾರವೂ ಇಲ್ಲ ಹಾಗೂ ಧರೆಯನ್ನು ದುರಸ್ಥಿ ಮಾಡಿಸಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಂದಾಯ ಇಲಾಖೆಯಲ್ಲಿ ದಕ್ಷ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿರುವ ತಹಶೀಲ್ದಾರ್ ರಶ್ಮಿ ಹಾಲೇಶ್ ಹಾಗೂ ಸಿಬ್ಬಂದಿಗಳು ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು ಇನ್ನಾದರೂ ಚಿಕ್ಕನಕೊಪ್ಪ ಗ್ರಾಮಕ್ಕೆ ಭೇಟಿ ನ್ಯಾಯ ಒದಾಗಿಸುತ್ತಾರೇಯೇ ? ಕಾದು ನೋಡಬೇಕಾಗಿದೆ.