Karnataka Rain : ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆ ತಿಳಿಸಿದಂತೆ, ರಾಜ್ಯದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕೆಲ ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ, ಗದಗ, ಬೀದರ್ ಜಿಲ್ಲೆಯಲ್ಲಿ ಕೂಡ ಭಾರೀ ಗಾಳಿ ಸಹಿತ ಗುಡುಗು, ಮಳೆ ಸಾಧ್ಯತೆಯಿದೆ ಎಂದು ವರದಿ ಮಾಡಿದೆ.
ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಚಾಮರಾಜನಗರ, ಮಂಡ್ಯ, ರಾಮನಗರ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.