ಹೊಸನಗರ

ಹೊಸನಗರ ; ನಾಳೆ ಹಿಂದೂ ಸಂಘಟನೆಗಳಿಂದ ಅದ್ದೂರಿ ರಾಮನವಮಿ ಉತ್ಸವ ಹಾಗೂ ಬೃಹತ್ ಶೋಭಾಯಾತ್ರೆ

ಹೊಸನಗರ ; ಏ. 19ರ ಶನಿವಾರ ಸಂಜೆ 4 ಗಂಟೆಗೆ ಹಿಂದೂ ಜಾಗರಣ ವೇದಿಕೆ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ರಾಮನವಮಿ ಉತ್ಸವ ಹಾಗೂ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದು ಸ್ಥಳೀಯ ಸಂಚಾಲಕ ರಮಿತ್ ಪೂಜಾರಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಸಂಜೆ 8 ಗಂಟೆಗೆ ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಶಿವಮೊಗ್ಗ ಪ್ರತ್ಯಂಗಿರ ದೇವಾಲಯದ ಶ್ರೀ ಸುಪ್ರಿತ್ ಗುರೂಜಿ ಹಾಗೂ ಶ್ರೀ ಕ್ಷೇತ್ರ ಸಿಗಂದೂರಿನ ಧರ್ಮದರ್ಶಿ ರಾಮಪ್ಪ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶ್ರೀ ರಾಮಸೇನೆ ರಾಜಾಧ್ಯಕ್ಷ ಗಂಗಾಧರ ಕುಲಕರ್ಣಿ ಮತ್ತು ಹಿಂದೂ ಮುಖಂಡ ರಘು ಸಕಲೇಶಪುರ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದು, ಆರ್‌ಎಸ್‌ಎಸ್‌ನ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಸತೀಶ್ ದಾವಣಗೆರೆ ಹಾಗೂ ಜಿಲ್ಲಾ ವಿಶ್ವಹಿಂದೂ ಪರಿಷತ್ ಅಧ್ಯಕ್ಷೆ ಪ್ರತಿಮಾ ಸತೀಶ್ ಜೋಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಕೋರಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!