ಹೊಸನಗರ

ಶಿಕ್ಷಣ ಪ್ರೇಮಿ ಬಿ.ಶೇಖರಪ್ಪ ಮಾಸ್ಟರ್ ಅಗಲಿಕೆಗೆ ರಂಭಾಪುರಿ ಜಗದ್ಗುರುಗಳ ಸಂತಾಪ

ಹಿರಿಯ ಪತ್ರಕರ್ತ ಪ್ರಶಾಂತ ರಿಪ್ಪನ್‌ಪೇಟೆ ಇವರ ತಂದೆಯವರಾದ ಶಿಕ್ಷಣ ಪ್ರೇಮಿ ಬಿ.ಶೇಖರಪ್ಪ ಮಾಸ್ಟರ್ ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

InShot 20260904 200211303

ರಿಪ್ಪನ್‌ಪೇಟೆ : ಹಿರಿಯ ಪತ್ರಕರ್ತ ಪ್ರಶಾಂತ ರಿಪ್ಪನ್‌ಪೇಟೆ ಇವರ ತಂದೆಯವರಾದ ಶಿಕ್ಷಣ ಪ್ರೇಮಿ ಬಿ.ಶೇಖರಪ್ಪ ಮಾಸ್ಟರ್ ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿಕ್ಷಕರಾಗಿ ಅತ್ಯಂತ ದಕ್ಷತೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಅವರು ಮಕ್ಕಳಲ್ಲಿ ದೇಶಾಭಿಮಾನ ರಾಷ್ಟ್ರಾಭಿಮಾನ ಮೂಡಿಸುವ ಕೆಲಸ ಮಾಡಿದ್ದಾರೆ. ನಿವೃತ್ತಿ ಹೊಂದಿದ ನಂತರವೂ ಅವರು ಧಾರ್ಮಿಕ ಸಾಮಾಜಿಕ ಶೈಕ್ಷಣಿಕೆ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಶ್ರೀ ರಂಭಾಪುರಿ ಪೀಠದೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಅವರ ಅಗಲಿಕೆ ನೋವಿನ ವಿಷಯವಾಗಿದೆ. ಅಗಲಿದ ಅವರ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿ ನೀಡಲಿ ಅವರು ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]