ಬಾಳೆಹೊನ್ನೂರು ; ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಹು ಭಾಷಾ ಪಂಡಿತರಾಗಿದ್ದ ಡಾ.ಪಂಚಾಕ್ಷರಿ ಹಿರೇಮಠರು ಶ್ರೀ ರಂಭಾಪುರಿ ಪೀಠದ ಹಲವಾರು ಗ್ರಂಥಗಳಿಗೆ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ಶ್ರೀ ಪೀಠದ ಮುಖವಾಣಿ ರಂಭಾಪುರಿ ಬೆಳಗು ಪತ್ರಿಕೆಗೆ ಕೆಲವು ವರ್ಷಗಳ ಕಾಲ ಸಂಪಾದಕರಾಗಿ ಕಾರ್ಯ ನಿರ್ವಹಿಸಿ ಪತ್ರಿಕೆಗೆ ಮೆರಗು ತಂದಿದ್ದನ್ನು ಮರೆಯುವಂತಿಲ್ಲ. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ ಅವರು ಶ್ರೀ ಪೀಠದೊಡನೆ ನಿಕಟ ಸಂಪರ್ಕ ಹೊಂದಿದ್ದರು.
ಅವರ ಅಗಲಿಕೆ ನೋವನ್ನುಂಟು ಮಾಡಿದೆ. ಅಗಲಿದ ಅವರ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿ ನೀಡಲಿ ಮತ್ತು ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.