ಹೊಸನಗರ ; ಸಾಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಎನ್ ರವೀಂದ್ರ ಸಾಗರ್‌ರನ್ನು ಸರ್ಕಾರ ನೇಮಿಸಿದೆ.
ಕರ್ನಾಟಕ ಸರ್ಕಾರದ ಆದೇಶದ ಮೇರೆಗೆ ಕೆಪಿಸಿಸಿ ವಿಭಾಗದ ರಾಜ್ಯಾಧ್ಯಕ್ಷರಾದ ಕೆ.ಪುಟ್ಟಸ್ವಾಮಿಗೌಡರ ಆದೇಶದ ಮೇರೆಗೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಶಿಫಾರಸ್ಸಿನ ಮೇರೆಗೆ ಎನ್ ರವೀಂದ್ರ ಸಾಗರ್ ಕೆಪಿಸಿಸಿ ಬ್ಲಾಕ್ ಅಧ್ಯಕ್ಷರ ನೇಮಕ ಮಾಡಲಾಗಿದ್ದು ಅದರ ಆದೇಶ ಪ್ರತಿಯನ್ನು ಬೇಳೂರು ಗೋಪಾಲಕೃಷ್ಣ ನೀಡಿದರು.

ಎನ್ ರವೀಂದ್ರ ಸಾಗರ್‌ರವರು ಕಾರ್ಮಿಕ ಇಲಾಖೆಯೊಂದಿಗೆ ಉತ್ತಮ ಸಂಬಂಧ ಹೊಂದಿದ್ದು ಅಂಗನವಾಡಿ ಕಾರ್ಯಕರ್ತೆಯರ ಸಂಘ ಸಂಘಟಕಾರಾಗಿ ಸೇವೆ ಸಲ್ಲಿಸುತ್ತ ಬಂದಿದ್ದು ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರ ಸಂಘದೊಂದಿಗೆ ನಿಕಟ ಸಂಬಂಧ ಹೊಂದಿದವರಾಗಿದ್ದು ಯಾವುದೇ ಸಂದರ್ಭದಲ್ಲಿಯೂ ಸಂಘ-ಸಂಸ್ಥೆಯೊಂದಿಗೆ ನಿಕಟ ಸಂಬಂಧ ಹಾಗೂ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದವರಾಗಿದ್ದಾರೆ.