ಶಿವಮೊಗ್ಗ

ಅಡಿಕೆಯಲ್ಲಿ ಕೆಂಪು ಮೂತಿ ಹುಳುವಿನ ಬಾಧೆ ; ನಿರ್ವಹಣಾ ಕ್ರಮಗಳೇನು ?

ಶಿವಮೊಗ್ಗ ; ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಕೆಂಪು ಮೂತಿ ಹುಳು ಸೊರಬ ಮತ್ತು ಸಾಗರ ಭಾಗದ ಅಡಿಕೆ ತೋಟಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದು, ರೈತರಿಗೆ ಸಮಸ್ಯೆಯಾಗಿದೆ. ಇವುಗಳ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ಡಾ.ನಾಗರಾಜಪ್ಪ ಅಡಿವಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ ನವಿಲೆ ಶಿವಮೊಗ್ಗ ಇವರು ತಿಳಿಸಿರುತ್ತಾರೆ.

WhatsApp Group Join Now
Telegram Group Join Now
Instagram Group Join Now

4 ರಿಂದ 5 ವರ್ಷದ ತೋಟದಲ್ಲಿ ಇದರ ಬಾಧೆ ಹೆಚ್ಚಾಗಿದ್ದು, ಗರಿಗಳು ಹಳದಿಯಾಗಿ ಬಾಡಿದಂತೆ ಕಾಣಿಸುತ್ತದೆ. ಕಾಂಡದ ಭಾಗದಲ್ಲಿ ರಂಧ್ರಗಳಾಗಿ ಕಂದು ಬಣ್ಣದ ರಸ ಸೋರುತ್ತದೆ. ತೀವ್ರ ಹಾನಿಗೊಳಗಾದ ಮರಗಳಲ್ಲಿ ಕಾಂಡದ ಭಾಗದಲ್ಲಿ ನಾರಿನ ಅಂಶ ಹೊರಬರುತ್ತದೆ. ಹಾನಿಗೊಳಗಾದ ಮರಗಳನ್ನು ಸೀಳಿ ನೋಡಿದಾಗ ವಿವಿಧ ಹಂತದ ಹುಳುಗಳನ್ನು ಕಾಣಬಹುದು. ಇದರಿಂದ ಬೆಳವಣಿಗೆ ಕುಂಠಿತವಾಗುತ್ತದೆ. ತೀವ್ರ ಹಾನಿಗೊಳಗಾದ ಮರಗಳು ಗಾಳಿ, ಮಳೆಗೆ ಬೀಳುತ್ತವೆ.

ನಿರ್ವಹಣಾ ಕ್ರಮಗಳು :

ಹುಳುವಿನ ಕಡೆ ಒಂದು ರಂಧ್ರವನ್ನು ಮಾಡಿ ಅದಕ್ಕೆ 4 ಮಿ.ಲೀ ಕ್ಲೊರಾಂಟ್ರಿನಿಲಿಪ್ರೋಲ್ 18.5 ಎಸ್.ಸಿ ಅಥವಾ 4 ಮಿ.ಲೀ ಇಂಡಾಕ್ಸಾಕಾರ್ಬ 14.5 ಎಸ್.ಸಿ ನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸುರಿಯಬೇಕು ಮತ್ತು ಸುಳಿಯಲ್ಲಿರುವ ರಂಧ್ರದಲ್ಲಿಯೂ ಕೂಡ ಸುರಿಯಬೇಕು. ಶೇ.5 ರ ಮೆಲಾಥಿಯಾನ್ ಪುಡಿ ಹಾಗೂ ಮರಳು ಸಮಪ್ರಮಾಣದಲ್ಲಿ ಬೆರೆಸಿ ಏಪ್ರಿಲ್-ಮೇ ಹಾಗೂ ಸೆಪ್ಟೆಂಬರ್-ಅಕ್ಟೋಬರ್ ತಿಂಗಳುಗಳಲ್ಲಿ ಎಲೆಯ ಸಂದುಗಳಲ್ಲಿ ಹಾಕಬೇಕು. ಯಾವುದೇ ಮರಗಳ ಕಾಂಡದಲ್ಲಿ ಗಾಯಗಳಾಗದಂತೆ ಎಚ್ಚರವಹಿಸಬೇಕು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಗಾಯಗಳಾಗಿದ್ದಲ್ಲಿ 5.0 ಮಿ.ಲೀ ಕ್ಲೋರೋಫೈರಿಫಾಸ್ 20 ಇ.ಸಿ ಸಂದುಗಳಲ್ಲಿ ಹಾಕಿ ಮಣ್ಣಿನ ಮಿಶ್ರಣದಿಂದ ಮುಚ್ಚಬೇಕು. ಕ್ಲೊರಾಂಟ್ರಿನಿಲಿಪ್ರೊಲ್ 18.5 ಎಸ್.ಸಿ (2 ಮಿ.ಲೀ + 500 ಮಿ.ಲೀ ನೀರು) ಅಥವಾ ಇಂಡಾಕ್ಸಾಕಾರ್ಬ 77.78 ಎಸ್.ಸಿ (2 ಮಿ.ಲೀ + 500 ಮಿ.ಲೀ ನೀರು) ಬೇರುಗಳ ಮುಖಾಂತರ ಕೊಡಬೇಕು. ಪ್ರತಿ ಹೆಕ್ಟೇರ್‌ಗೆ ಒಂದರಂತೆ ಮೋಹಕ ಬಲೆಯನ್ನು ಇಡಬೇಕು ಮತ್ತು 6 ತಿಂಗಳಿಗೊಮ್ಮೆ ಲ್ಯೂರ್‌ನ್ನು ಬದಲಾಯಿಸಬೇಕು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]