ರೈಲ್ವೆ ಟಿಕೆಟ್ ದರ ಏರಿಕೆ ತತ್ತಕ್ಷಣ ಹಿಂಪಡೆಯಬೇಕು – ರೇಖಾ ರಂಗನಾಥ್ ಆಕ್ರೋಶ

Written by Koushik G K

Published on:

ಶಿವಮೊಗ್ಗ: ಕೇಂದ್ರ ಸರ್ಕಾರದ ಹೊಸ ರೈಲ್ವೆ ಟಿಕೆಟ್ ದರ ಏರಿಕೆ ಕ್ರಮದ ವಿರುದ್ಧ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಾಮಾನ್ಯ ಜನರ ಸಾರಿಗೆ ವ್ಯವಸ್ಥೆ ಎಂದು ಹೆಸರಾಗಿರುವ ರೈಲ್ವೆ ದರಗಳನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ, ದೇಶದ ಮಧ್ಯಮ ಮತ್ತು ಬಡ ವರ್ಗದ ಜನರ ಜೀವನದ ಮೇಲೆ ನೇರ ಪರಿಣಾಮ ಬೀರಿದೆ,” ಎಂದು ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಎಲ್ಲಾ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೇರಿಕೆಯಿಂದಾಗಿ ಪ್ರತಿಯೊಂದು ಕುಟುಂಬದ ಬಜೆಟ್ ಏರುಪೇರಾಗಿದೆ. ಇದೇ ವೇಳೆ ರೈಲು ಪ್ರಯಾಣದ ದರ ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡಲು ಹೊರಟಿದೆ

ರೈಲ್ವೆ ಇಲಾಖೆ ಪ್ರಪಂಚದಲ್ಲಿಯೇ ಅತ್ಯಂತ ಹೆಚ್ಚು ಪ್ರಯಾಣಿಕರೊಂದಿಗೆ ಲಾಭದಾಯಕವಾಗಿ ಕಾರ್ಯನಿರ್ವಹಿಸುತ್ತಿರುವ ಎತ್ತರದ ಸಾರಿಗೆ ವ್ಯವಸ್ಥೆಯಾಗಿದ್ದರೂ, ಕೇಂದ್ರ ಸರ್ಕಾರ ಅದರ ದರ ಏರಿಸಲು ಮುಂದಾಗಿದೆ ಎಂಬುದು ಜನ ವಿರೋಧಿ ಕ್ರಮವಾಗಿದೆ ಎಂಬುದು ಅವರ ಅಭಿಪ್ರಾಯ.

ರೈಲ್ವೆಗೆ ಶ್ವೇತಪತ್ರ ಬೇಕು

“ರೈಲ್ವೆ ಇಲಾಖೆಗೆ ಸಂಬಂಧಿಸಿದ ಪ್ರತ್ಯೇಕ ಬಜೆಟ್ ಮಂಡನೆ ಪದ್ಧತಿಯನ್ನು ಕೇಂದ್ರ ಸರ್ಕಾರ ತೆಗೆದುಹಾಕಿರುವುದರಿಂದ ಇಲಾಖೆಯ ಕಾರ್ಯವೈಖರಿ ಪಾರದರ್ಶಕವಲ್ಲ. ಆದ್ದರಿಂದ, ಟಿಕೆಟ್ ದರ ಏರಿಕೆಗೂ ಮೊದಲು ರೈಲ್ವೆ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಶ್ವೇತಪತ್ರ ಪ್ರಕಟಿಸಬೇಕು,”

ಕೇಂದ್ರ ಬಿಜೆಪಿ ಸರ್ಕಾರ ತತ್ತಕ್ಷಣದಲ್ಲಿ ಬೆಲೆ ಏರಿಕೆಯನ್ನು ಹಿಂಪಡೆಯದಿದ್ದಲ್ಲಿ ಜನಸಾಮಾನ್ಯರು ರಸ್ತೆಗೆಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ

Read More :ಹೈಕೋರ್ಟ್ ನಿಂದ ಆರ್.ಎಂ. ಮಂಜುನಾಥ್ ಗೌಡಗೆ ಜಾಮೀನು ಮಂಜೂರು

Leave a Comment