ಹೊಸನಗರ

ಕೋಡೂರು ಬ್ಲಾಸಂ ಶಾಲೆಯಲ್ಲಿ ಗಣರಾಜ್ಯೋತ್ಸವ ಹಾಗೂ ರಾಷ್ಟೀಯ ಯುವಜನೋತ್ಸವ | ಜನಾಕರ್ಷಣೆಗೆೊಂಡ ಸ್ವಾಮಿ ವಿವೇಕಾನಂದರ ವೇಷಭೂಷಣ

ರಿಪ್ಪನ್‌ಪೇಟೆ ; 76ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷಭೂಷಣ, ಪಥಸಂಚಲನ ಸಾರ್ವಜನಿಕರನ್ನು ಆಕರ್ಷಿಸಿತು.

WhatsApp Group Join Now
Telegram Group Join Now
Instagram Group Join Now

ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ ಸ್ವಾಮಿ ವಿವೇಕಾನಂದರ ವೇಷಭೂಷಣದೊಂದಿಗೆ ಮಕ್ಕಳ ಪಥ ಸಂಚಲನಕ್ಕೆ ತಾಲ್ಲೂಕು ಪಂಚಾಯ್ತಿಮಾಜಿ ಸದಸ್ಯ ಹಾಗೂ ಬ್ಲಾಸಂ ಅಕಾಡಮಿ ಅಧ್ಯಕ್ಷ ಚಂದ್ರುಮೌಳಿ ಚಾಲನೆ ನೀಡಿ ಮಾತನಾಡಿ, ದೇಶದ ಅಖಂಡತೆಯನ್ನು ಹೊರದೇಶದಲ್ಲಿ ಪ್ರಚರಪಡಿಸುವ ಮೂಲಕ ವಿಶ್ವ ನಾಯಕರಾಗಿರುವ ಸ್ವಾಮಿ ವಿವೇಕಾನಂದರ ಆದರ್ಶಗಳು ಇಂದಿನ ವಿದ್ಯಾರ್ಥಿಗಳಲ್ಲಿ ಬೆಳೆಸುವ ಕೆಲಸ ಮಾಡುವುದರೊಂದಿಗೆ ಜನಜಾಗೃತಗೊಳಿಸುವ ನಿಟ್ಟಿನಲ್ಲಿ ಸಣ್ಣದೊಂದು ಪ್ರಯತ್ನ ನಡೆಸುತ್ತಿರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಸಂ ಅಕಾಡಮಿ ಟ್ರಸ್ಟಿಗಳಾದ ಸುರೇಶ್, ದಿವಾಕರಶೆಟ್ಟಿ, ಮುಖ್ಯೋಪಾಧ್ಯಾಯ ಸುಧಾಕರ್, ಪ್ರಕಾಶ, ಕೋಮಲ, ನಾಗಶ್ರೀ, ದೀಪಾ, ಅಶ್ವಿನಿ, ಗೀತಾ, ಆಸ್ಮಾ, ಅನಿಷಾ, ಪೋಷಕರು ಇನ್ನಿತರರು ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ವಿದ್ಯಾರ್ಥಿಗಳ ಪಥಸಂಚಲನವು ಕೋಡೂರು ಮುಖ್ಯ ರಸ್ತೆಯಲ್ಲಿ ಸಂಚರಿಸಿ ಜನಾಕರ್ಷಣೆಗೊಂಡಿತು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!