ಹೊಸನಗರ

ಹೊಸನಗರ ; 7ನೇ ವೇತನ ಆಯೋಗದಲ್ಲಿ ನಿವೃತ್ತ ನೌಕರರಿಗೆ ಆಗಿರುವ ಆರ್ಥಿಕ ನಷ್ಟದ ಬೇಡಿಕೆ ಈಡೇರಿಸುವಂತೆ ಮನವಿ

ಹೊಸನಗರ ; ಕರ್ನಾಟಕ ನಿವೃತ್ತ ನೌಕರರ 25 ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾದ ನೌಕರರಿಗೆ 7ನೇ ವೇತನ ಆಯೋಗದ ಅನುಷ್ಟಾನದಲ್ಲಿ ನಿವೃತ್ತಿ ಉಪಲಬ್ಧಗಳನ್ನು ಪಾವತಿಸುವಂತೆ ತಾಲ್ಲೂಕು ಸಂಚಾಲಕ ಕುಬೇಂದ್ರಪ್ಪನವರ ನೇತೃತ್ವದಲ್ಲಿ ಹೊಸನಗರದ ತಹಶೀಲ್ದಾರ್ ರಶ್ಮಿಗೆ ಮನವಿ ಪತ್ರ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಕುಬೇಂದ್ರಪ್ಪ, ಪ್ರಸ್ತುತ ಸೇವೆಯಲ್ಲಿರುವ ಅಧಿಕಾರಿ ನೌಕರರಂತೆ ನಾವು 2022ರ ಜು.1 ರಿಂದಲೇ ಪಡೆಯಬೇಕಿದ್ದ ನಿವೃತ್ತಿ ವೇತನದ ಪ್ರವಾಸವನ್ನು (Arrears) ಕೇಳುತ್ತಿರುವುದಿಲ್ಲ ಬದಲಾಗಿ ನಾವು ಕೇಳುತ್ತಿರುವುದು 7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದ ಮೇಲೆ ನಿವೃತ್ತಿ ಆರ್ಥಿಕ ಸೌಲಭ್ಯಗಳಾದ ಡಿ.ಪಿ.ಆರ್.ಬಿ. ಕಮ್ಯುಟೇಶನ್ ಹಾಗೂ ಗಳಿಕೆ ರಜೆ ನಗದೀಕರಣಗಳ ಸೌಲಭ್ಯಗಳ ಲೆಕ್ಕಾಚಾರದ ವ್ಯತ್ಯಾಸದ ಮೊತ್ತವನ್ನು ಮಾತ್ರ (One Time Settlement) ಕೊಡಬೇಕು.

ಈ ಹಿಂದೆ ನಾವುಗಳು ಸರ್ಕಾರವನ್ನು ಒತ್ತಾಯಿಸಿ ಬೆಳಗಾವಿಯಲ್ಲಿ ಜರುಗಿದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣಸೌಧದ ಮುಂದೆ 2024ರ ಡಿ.16 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ್ದ 20 ಸಾವಿರಕ್ಕೂ ಅಧಿಕ ನೌಕರರು ಸಮಾವೇಶಗೊಂಡ ಸಂದರ್ಭದಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಯವರು ಸರಕಾರದ ವತಿಯಿಂದ ನಮ್ಮ ಮನವಿಯನ್ನು ಸ್ವೀಕರಿಸಿದ ಸಂದರ್ಭದಲ್ಲಿ ಸಚಿವರೊಂದಿಗೆ ಆಗಮಿಸಿದ್ದ ಪಿ. ಸಿ. ಜಾಫರ್ ಸರಕಾರದ ಕಾರ್ಯದರ್ಶಿಗಳು (ಆ.& ಸಂ.) ಆರ್ಥಿಕ ಇಲಾಖೆ, ಬೆಂಗಳೂರು ಇವರು ಆಗಮಿಸಿದ ಸಂದರ್ಭದಲ್ಲಿ ಅಧಿವೇಶನದ ನಂತರ ಬೆಂಗಳೂರಿನಲ್ಲಿ ತಮ್ಮ ಜೊತೆ ಸಭೆ ಆಯೋಜಿಸಿ ನಿಮ್ಮ ವೇದಿಕೆಯ ಮುಖಂಡರನ್ನು ಮಾತುಕತೆಗೆ ಆಹ್ವಾನಿಸುತ್ತೇವೆ. ಆಗ ತಾವು ಬಂದು ತಮ್ಮ ಅಹವಾಲು ಮಂಡಿಸಿರಿ ಎಂದು ತಿಳಿಸಿದ್ದು ಅಲ್ಲದೇ ಸಚಿವ ಸತೀಶ ಜಾರಕಿಹೊಳಿ ತಮ್ಮನ್ನು ಸುವರ್ಣ ವಿಧಾನಸೌಧದಲ್ಲಿ ಭೇಟಿಯಾಗಲು ವ್ಯವಸ್ಥೆ ಮಾಡಿದಂತೆ ನಮ್ಮ ವೇದಿಕೆಯ ನಿಯೋಗವು ದಿನಾಂಕ 2024ರ ಡಿ.10 ರಂದು ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ತಮ್ಮನ್ನು ಭೇಟಿಯಾದಾಗ ತಾವುಗಳು ಈ ಅಧಿವೇಶನದ ನಂತರ ಸಭೆ ಕರೆದು ಚರ್ಚಿಸಿ ನಿರ್ಧರಿಸೋಣ ಎಂದು ಹೇಳಿರುತ್ತೀರಿ. ಆದರೆ ಈವರೆಗೂ ತಾವುಗಳು ಸಭೆ ಏರ್ಪಾಡು ಮಾಡಿಲ್ಲ. ಸರ್ಕಾರ ತಕ್ಷಣ ನಮ್ಮಗಳ ಸಭೆ ಕರೆದು ನಮ್ಮ ಬೇಡಿಕೆಯನ್ನು ಈಡೇರಿಸುವಂತೆ ಈ ಮೂಲಕ ಕೇಳಿಕೊಂಡರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಮನವಿ ಪತ್ರ ನೀಡುವ ಸಂದರ್ಭದಲ್ಲಿ ನಿವೃತ್ತ ಸರ್ಕಾರಿ ನೌಕರರಾದ ಮಲ್ಲಿಕಾರ್ಜುನ ಸ್ವಾಮಿ, ಶ್ರೀಪಾದ, ಶಾಂತಪ್ಪ, ಶಾರದಮ್ಮ, ಸುಶೀಲಮ್ಮ, ಸುಬ್ರಹ್ಮಣ್ಯ, ಶಿವಮೂರ್ತಿ, ಗುರುರಾಜ್, ಸಂಗಮೇಶ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]