ಶಿವಮೊಗ್ಗ ; ವನ (ಸಂರಕ್ಷಣೆ ಮತ್ತು ಸಂವರ್ಧನೆ) ಅಧಿನಿಯಮ 1980ರ ತಿದ್ದುಪಡಿ ಅಧಿನಿಯಮ 1988 ಮತ್ತು 2021ರ ಅಧಿಸೂಚನೆ ಹಾಗೂ ಸರ್ಕಾರದ ನಡವಳಿ ಆದೇಶ ಸಂ.ಅಪಜೀ 185 ಎಫ್ಎಎನ್ 2011 ಬೆಂಗಳೂರು ದಿನಾಂಕ:05.05 2022 ರಂತೆ ಜಿಲ್ಲೆಯಲ್ಲಿರುವ ವಿವಿಧ ರೀತಿಯ ಅರಣ್ಯ ಪ್ರದೇಶಗಳ ಮಾಹಿತಿಯನ್ನು ಸಂಗ್ರಹಿಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗಿದ್ದು, ಅರಣ್ಯ ಪ್ರದೇಶಗಳಲ್ಲಿ ಘೋಷಣೆಯಾದ ಅಥವಾ ಅರಣ್ಯವೆಂದು ಅಧಿಸೂಚನೆಯಾದ ಮತ್ತು ಸರ್ಕಾರಿ ದಾಖಲೆಗಳಲ್ಲಿ ಅರಣ್ಯವೆಂದು ನಮೂದಿಸಿರುವ ಅರಣ್ಯ ಪ್ರದೇಶಗಳ ಗ್ರಾಮವಾರು, ಸರ್ವೆ ನಂಬರ್ ವಾರು ಮಾಹಿತಿಯನ್ನು ಸಂಗ್ರಹಿಸುವ ಬಗ್ಗೆ ವಿಭಾಗೀಯ ಮತ್ತು ರಾಜ್ಯ ಮಟ್ಟದ ತಜ್ಞರ ಸಮಿತಿಯು ಪರಿಭಾವಿತ ಅರಣ್ಯವನ್ನು
(Deemed Forest) ಗುರುತಿಸಲು ನೀಡಿರುವ ಮಾನದಂಡಗಳಂತೆ ಮತ್ತು ತಜ್ಞರ ಸಮಿತಿ ವರದಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಮತ್ತು ತಜ್ಞರ ಸಮಿತಿಯಲ್ಲಿ ಸೇರ್ಪಡೆಯಾಗದೆ ಇರುವ, ಕೈಬಿಟ್ಟ ಪರಿಭಾವಿತ ಅರಣ್ಯ ಪ್ರದೇಶಗಳನ್ನು ಪರಿಗಣಿಸಿ, ಪರಿಷ್ಕರಿಸಿ ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಾಗಿರುವುದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಪರಿಭಾವಿತ ಅರಣ್ಯ ಪ್ರದೇಶಗಳ ಸರ್ವೆ ಕಾರ್ಯ ನಡೆಸಲು ಕಂದಾಯ, ಅರಣ್ಯ, ಭೂಮಾಪನ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ/ನೌಕರರನ್ನು ಒಳಗೊಂಡಂತೆ ಜಂಟಿ ಸರ್ವೆ ತಂಡಗಳನ್ನು ರಚನೆ ಮಾಡಲಾಗಿದೆ.

ಸದರಿ ತಂಡವು ತಮ್ಮ ತಾಲ್ಲೂಕು, ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಭಾವಿತ ಅರಣ್ಯ ಪ್ರದೇಶಗಳ ಜಂಟಿ ಸರ್ವೆ ತಂಡದ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡುವುದರೊಂದಿಗೆ ಸಾರ್ವಜನಿಕರು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





