ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆ ಕುರಿತು ಮೂಲೆಗದ್ದೆ ಶ್ರೀಗಳ ನೇತೃತ್ವದಲ್ಲಿ ನಾಳೆ ಪೂರ್ವಭಾವಿ ಸಭೆ 

Written by Mahesha Hindlemane

Published on:

ಹೊಸನಗರ ; ಕೇತ್ರ ಮರು ವಿಂಗಡಣೆ ಹಿನ್ನಲೆ 2008ರಲ್ಲಿ ಹೊಸನಗರ ತನ್ನ ವಿಧಾನಸಭಾ ಕ್ಷೇತ್ರದ ಅಸ್ತಿತ್ವವನ್ನು ರಾಜ್ಯದ ರಾಜಕೀಯ ಶಕ್ತಿ ಕೇಂದ್ರವಾದ ವಿಧಾನಸೌಧ ಕಳೆದುಕೊಂಡಿತು.  ಹೊಸನಗರ ವಿಧಾನಸಭಾ ಕ್ಷೇತ್ರದ ಮಾನ್ಯತೆ ರದ್ದಾಯಿತು. ಬಳಿಕ ತಾಲೂಕಿನ ತಲಾ ಎರಡು ಹೋಬಳಿ ಸಾಗರ ಕ್ಷೇತ್ರಕ್ಕೆ ಹಾಗೂ ತೀರ್ಥಹಳ್ಳಿ ಕ್ಷೇತ್ರಕ್ಕೆ ಹರಿದು ಹಂಚಿಕೆಯಾಯಿತು. ಅಂದಿನಿಂದ ಇಂದಿನವರೆಗೂ ತಾಲೂಕಿನಲ್ಲಿ ಅಭಿವೃದ್ಧಿ ಮರೀಚಿಕೆ ಆಗಿದೆ. ಇಡೀ ತಾಲೂಕು ಪಶ್ಚಿಮ ಘಟ್ಟಗಳಿಂದ ಆವೃತವಾಗಿದ್ದು ಜನಸಂಖ್ಯೆ ಹೆಚ್ಚಳ ಆಗದಿರಲು ಕಾರಣವಿರಬಹುದು. ಬರುವ 2028ರ ಜನಗಣತಿ ವೇಳೆ, ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆ ಆಗಬೇಕು ಎಂಬ ಕಾರಣಕ್ಕೆ ನಾಳೆ (ಫೆ. 12ಕ್ಕೆ) ಪಟ್ಟಣದ ಗಾಯತ್ರಿ ಮಂದಿರದಲ್ಲಿ ಬೆಳಗ್ಗೆ 10-30 ಪಕ್ಷಾತೀತ, ಧರ್ಮತೀತ , ಜಾತ್ಯಾತೀತ ಪೂರ್ವಭಾವಿ ಸಭೆಯು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಸಾರಥ್ಯದಲ್ಲಿ ಹಮ್ಮಿಕೊಳ್ಳಲಾಗಿದೆ. ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಹಾಜರಿರುವಂತೆ ರೈತ ಕೃಷಿ ಉತ್ಪಾದನಾ ಸಂಘದ ಅಧ್ಯಕ್ಷ ಎನ್.ಆರ್. ದೇವಾನಂದ್ ಕರೆ ನೀಡಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬುಧವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ  ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶೀಘ್ರದಲ್ಲೇ ಹೊಸನಗರ ವಿಧಾನಸಭಾ ಕ್ಷೇತ್ರದ ಮರುಸ್ಥಾಪನೆಗಾಗಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ತಾಲೂಕಿನ ಮೂಲೆಗದ್ದೆ ಮಠದ ಶ್ರೀ ಸದಾನಂದ ಶಿವಯೋಗಾಶ್ರಮದ ಪೀಠಾಧ್ಯಕ್ಷ ಅಭಿನವ ಚನ್ನಬಸವ ಮಹಾಸ್ವಾಮಿಗಳ ನೇತೃತ್ವದಲ್ಲಿ ಹೊಸನಗರ ಪಟ್ಟಣದ ಕೇಂದ್ರ ಸ್ಥಾನದಿಂದ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ವಿಧಾನಸಭಾ ಕ್ಷೇತ್ರದ ಮರು ಸ್ಥಾಪನೆಗೆ ಆಗ್ರಹಿಸಿ ನೂರಾರು ಸಂಖ್ಯೆಯಲ್ಲಿ ಜಾಗೃತಿ ಜಾಥಾ ಸದುದ್ದೇಶವಿದೆ ಎಂದರು.  

ಶಿವಮೊಗ್ಗ ‌ಸಂಸಾದ ಬಿ.ವೈ.ರಾಘವೇಂದ್ರ ಸೇರಿದಂತೆ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು, ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.

ಈ ಹಿಂದೆಯೇ, ಹೊಸನಗರ ಕ್ಷೇತ್ರದ ಮಾಜಿ ಶಾಸಕ, 95ರ ವಯೋಮಾನದ ಬಿ. ಸ್ವಾಮಿರಾವ್ ಕ್ಷೇತ್ರ ಮರುಸ್ಥಾಪನೆಗೆ ಹಲವಾರು ಬಾರಿ ಧ್ವನಿ ಎತ್ತಿದ್ದರು. ಕಳೆದ ತಿಂಗಳು ಮೂಡುಗೊಪ್ಪ (ನಗರ) ಪಂಚಾಯತಿ ಸದಸ್ಯ ಕರುಣಾಕರ ಶೆಟ್ಟಿ ತಾಲ್ಲೂಕಿನ 30 ಗ್ರಾಮ ಪಂಚಾಯತಿಗಳಿಗೆ ಸೈಕಲ್ ಜಾಥಾದ ಮೂಲಕ ಭೇಟಿ ನೀಡಿ ಜಾಗೃತಿ ಮೂಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಹೋರಾಟದ ಪೂರ್ವಭಾವಿ ಸಭೆಯನ್ನು ಫೆಬ್ರವರಿ 12 ಗುರುವಾರ ಬೆಳಗ್ಗೆ 10-30 ಗಂಟೆಗೆ ಸರಿಯಾಗಿ ಪಟ್ಟಣದ ಶ್ರೀ ಗಾಯತ್ರಿ ಮಂದಿರದಲ್ಲಿ ಮೂಲೆಗದ್ದೆ ಮಠದ ಶ್ರೀಗಳ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗುತ್ತದೆ.

ಈ ಸಭೆಗೆ ತಾಲ್ಲೂಕಿನ ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾ ಪಂಚಾಯತಿ, ತಾಲೂಕು ಹಾಗು ಗ್ರಾಮ ಪಂಚಾಯತಿಗಳ ಮಾಜಿ ಜನಪ್ರತಿನಿಧಿಗಳು, ರೈತಸಂಘ, ದಲಿತ ಸಮಿತಿ ಸದಸ್ಯರು, ಹೋರಾಟಗಾರರು, ಮಹಿಳಾ ಸಂಘಗಳು, ಕಾಲೇಜು ಮಟ್ಟದ ಆಸ್ತಕ ವಿದ್ಯಾರ್ಥಿಗಳು ಹಾಗೂ ತಾಲೂಕಿನ ಸಮಸ್ತ ಜನತೆ ಪಕ್ಷಾತೀತವಾಗಿ ಹಾಗೂ ಜಾತ್ಯಾತೀತವಾಗಿ ಆಗಮಿಸಿ ಸಭೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಭಿಪ್ರಾಯ, ಅನಿಸಿಕೆ ಹಂಚಿಕೊಳ್ಳಲು ಹಾಗು ಹೋರಾಟದ ಮುಂದಿನ ರೂಪುರೇಷೆ ಕುರಿತು ಚರ್ಚಿಸಲು ಮುಕ್ತ ಅವಕಾಶವಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕಲಗೋಡು ರತ್ನಾಕರ್, ಗಣಪತಿ ಬೆಳಗೋಡು, ಮೊಬೈಲ್ ಮುರಳಿ, ಸದಾಶಿವ ಶೆಟ್ಟಿ, ಚಿದಂಬರ ಹೂವಿನಕೋಣೆ, ಚಿಕ್ಕಮಣತಿ ಅವಿನಾಶ್, ಮುಂಬಾರು ಶೇಖರಪ್ಪ, ಎಂ.ಪಿ.ಸುರೇಶ್, ಜಯನಗರ ಗುರು, ಉಬೇದ್ ಸಾಬ್, ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Comment