ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಆಯನೂರು ಸಮೀಪದ ಹೊಸೂರು ನಿವಾಸಿ ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಜಿ.ಎಸ್ (65) ಮೃತ ದುರ್ದೈವಿ. ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥ ಗ್ರಾಮದ ಸಂಬಂಧಿಕರ ಮನೆಯಲ್ಲಿ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಗಿಸಿಕೊಂಡು ಊರಿಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ಘಟನೆ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

