ರಿಪ್ಪನ್‌ಪೇಟೆ ; ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಇಲ್ಲಿನ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕುಳಿತಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವಿನಾಯಕ ವೃತ್ತದ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖಪ್ಪ (50) ಹೃದಯಾಘಾತದಿಂದ ಮೃತ ಪಟ್ಟಿರಬಹುದೆಂದು ಹೇಳಲಾಗಿದೆ.

ಮೃತ ವ್ಯಕ್ತಿ ತೀವ್ರ ಮದ್ಯ ವ್ಯಸನಿಯಾಗಿದ್ದು ಕಳೆದೆರಡು ದಿನಗಳಿಂದ ಮನೆಗೆ ತೆರಳದೇ ಬಸ್ ನಿಲ್ದಾಣದಲ್ಲಿಯೇ ತಂಗಿದ್ದ ಎನ್ನಲಾಗಿದೆ.

ಈ ಸುದ್ದಿ ಹರಡುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment