ರಿಪ್ಪನ್‌ಪೇಟೆ ; ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾಪೂಜಿ ನಗರದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜ್ ಸ್ಪರ್ಧೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಸಾಕಷ್ಟು ಬಹುಮಾನಗಳನ್ನು ಗಳಿಸುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜ್ ಪ್ರಾಚಾರ್ಯ ಪ್ರೋ.ವಿರೂಪಾಕ್ಷಪ್ಪ ಅಭಿನಂದಿಸಿದ್ದಾರೆ.
ಶಿವಮೊಗ್ಗ ಬಾಪೂಜಿನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸಂಜೆ ಕಾಲೇಜ್‌ನವರು ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜ್ ಜಾನಪದ ಸಮೂಹ ನೃತ್ಯ, ಜಾನಪದ ಸಮೂಹ ಗಾಯನ, ರಸಪ್ರಶ್ನೆ ಮತ್ತು ಭಾವಗೀತೆ ಸ್ಪರ್ಧೆಗಳನ್ನು ಸಾಂಸ್ಕೃತಿಕ ವೇದಿಕೆವತಿಯಿಂದ “ಸ್ಪರ್ಧಾ ಸಂಗಮ -2025’’ ಆಯೋಜಿಸಲಾದ ಸ್ಪರ್ಧೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿನಿಯರಾದ ಎಸ್.ಮೇಘನಾ, ಜಿ.ನಾಗಶ್ರೀ, ಎಂ.ಅನುಪಮ, ಕಾವ್ಯ, ಧನ್ಯ, ಸ್ವಾತಿ ಇವರುಗಳು ಜಾನಪದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್ ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಡಾ.ಟಿ.ವಿದ್ಯಾಪವಾರ್ ಹಾಗೂ ಸಿಡಿಸಿ ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾಲೇಜ್ ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.