Ripponpete

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 98 ಫಲಿತಾಂಶ

ರಿಪ್ಪನ್‌ಪೇಟೆ ; ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆ ಶೇ.98 ರಷ್ಟು ಫಲಿತಾಂಶ ಬಂದಿದೆ ಎಂದು ಉಪಪ್ರಾಚಾರ್ಯ ಕೆಸವಿನಮನೆ ರತ್ನಾಕರ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಪರೀಕ್ಷೆಗೆ ಶಾಲೆಯಿಂದ 161 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ 157 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ಇದರಲ್ಲಿ 18 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದು 82 ವಿದ್ಯಾರ್ಥಿಗಳು ಪ್ರಥಮ ಸ್ಥಾನ, ಉಳಿದ 64 ವಿದ್ಯಾರ್ಥಿಗಳು ದ್ವಿತೀಯ ಮತ್ತು ತೃತೀಯ ಸ್ಥಾನದಲ್ಲಿ ತೇರ್ಗಡೆಯಾಗುವ ಮೂಲಕ ಶಾಲೆಗೆ ಉತ್ತಮ ಸಾಧಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಆಂಗ್ಲ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳು ಶೇ. 100 ಫಲಿತಾಂಶ ಸಾಧಿಸಿದ್ದರೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಶೇ.98 ಉತ್ತೀರ್ಣರಾಗಿದ್ದಾರೆ.

ದೀಕ್ಷಿತ್ 608/625 (97.28%) ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ವೈಭವ್ ಎಸ್ 583/625 (93.28%) ಮತ್ತು ಟೀನಾ ಎಸ್ 568/625 (90.88%) ಅಂಕಗಳನ್ನು ಪಡೆದು ಶಾಲೆಯ ಹೆಗ್ಗಳಿಕೆಯನ್ನು ಹೆಚ್ಚಿಸಿದ್ದಾರೆ ಎಂದರು.

“ನಮ್ಮ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಈ ಬಾರಿ 98% ಫಲಿತಾಂಶ ಸಾಧಿಸಿರುವುದು ಅತ್ಯಂತ ಸಂತೋಷಕರ ಸಂಗತಿ. ಶಿಕ್ಷಕರ ಶ್ರಮ, ವಿದ್ಯಾರ್ಥಿಗಳ ಕಠಿಣ ಪರಿಶ್ರಮವೂ ಈ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ. ಪೋಷಕರ ಸಹಕಾರವೂ ಶ್ಲಾಘನೀಯ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೆಚ್ಚಿನ ಒತ್ತು ನೀಡಿ ಶ್ರಮಿಸಿದ್ದಾರೆ.”
– ಚಂದ್ರಪ್ಪ ಡಿ. ಬಸವಾಪುರ, ಎಸ್‌ಡಿಎಂಸಿ ಅಧ್ಯಕ್ಷ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!