ಹೊಸನಗರ

ಶತಮಾನೋತ್ಸವ ಸಂಭ್ರಮದ ಹೊಸ್ತಿಲಿನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ; ಪೂರ್ವ ಸಿದ್ದತಾ ಸಭೆ

InShot 20260903 184320366

ರಿಪ್ಪನ್‌ಪೇಟೆ : ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ 1926 ರಲ್ಲಿ ಪ್ರಾರಂಭಗೊಂಡು ಈಗ 100 ವರ್ಷ ತುಂಬುವ ಸುಸಂದರ್ಭದಲ್ಲಿ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಇಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಹಳೆ ವಿದ್ಯಾರ್ಥಿಗಳ ಪೂರ್ವ ಸಿದ್ದತಾ ಸಭೆಯನ್ನು ಏರ್ಪಡಿಸಲಾಗಿತ್ತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಳೆದ 100 ವರ್ಷಗಳಲ್ಲಿ ಈ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಉನ್ನತ ಹುದ್ದೆಯನ್ನು ಅಲಂಕರಿಸಿರುವ ಮತ್ತು ವ್ಯಾಪಾರ ವಹಿವಾಟು ನಡೆಸುವವರು ಹಾಗೂ ಉದ್ಯಮದಲ್ಲಿ ತೊಡಗಿದವರು ದೇಶ ಸೇವೆಗೆ ಹೋಗಿರುವವರು ಶಿಕ್ಷಕರಾಗಿ ಹೀಗೆ ಸರ್ಕಾರಿ ನೌಕರಿಯಲ್ಲಿರುವವರು ಸಾಕಷ್ಟು ಮಂದಿ ಇದ್ದಾರೆ. ಅವರನ್ನು ಸಂಪರ್ಕಿಸಿ ಇನ್ನೊಂದು ಸಭೆಯನ್ನು ನಡೆಸಿ ಶತಮಾನೋತ್ಸವ ಸಮಿತಿಯನ್ನು ರಚಿಸಿ ನೆನಪಿನಲ್ಲಿ ಉಳಿಯುವಂತಹ ಉತ್ತಮ ಸಮಾರಂಭವನ್ನು ಹಮ್ಮಿಕೊಳ್ಳುವುದರ ಬಗ್ಗೆ ಸಭೆಯಲ್ಲಿ ಭಾಗವಹಿಸಿದ ಹಲವರು ತಮ್ಮ ಸಲಹೆ ಸೂಚನೆಗಳನ್ನು ವ್ಯಕ್ತಪಡಿಸಿದರು.

ಈ ಸಭೆಯಲ್ಲಿ ಹಳೆ ವಿದ್ಯಾರ್ಥಿಗಳಾದ ಆರ್.ಎ.ಚಾಬುಸಾಬ್, ಟಿ.ಆರ್.ಕೃಷ್ಣಪ್ಪ, ನಿರೂಪ್ ಕುಮಾರ್, ಆಸಿಫ್‌ಭಾಷಾ, ಶಿವಪ್ಪ ಬೈರಾಪುರ, ಪ್ರೇಮನಾಥ್, ಪಿ.ರಮೇಶ್, ಸಿ.ಚಂದ್ರಬಾಬು, ಸುಂದರೇಶ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜಪ್ಪ, ಧನಲಕ್ಷ್ಮಿ, ಚಂದ್ರಬಾಬು, ಹೆಚ್.ಎನ್.ಉಮೇಶ್, ಇನ್ನಿತರ ಹಲವರು ಪಾಲ್ಗೊಂಡು ತಮ್ಮ ಸಲಹೆಗಳನ್ನು ನೀಡಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮುಖ್ಯೋಪಾದ್ಯಾಯರು ಮತ್ತು ಶಾಲಾ ಶಿಕ್ಷಕ ಬಳಗದವರು ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]