Ripponpete ಅಕ್ರಮವಾಗಿ ಜಾನುವಾರು ಸಾಗಾಟ, ವಾಹನ ಸಮೇತ ಮೂವರ ಆರೋಪಿಗಳ ಬಂಧನ

Written by malnadtimes.com

Published on:

Ripponpete | ಇಂದು ಬೆಳಗಿನಜಾವ ಅಕ್ರಮವಾಗಿ ಜಾನುವಾರುಗಳನ್ನು ವಾಹನದಲ್ಲಿ ತುಂಬಿಕೊಂಡು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯನ್ನಾದರಿಸಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು (Police) ವಾಹನ ತಡೆದು ಪರಿಶೀಲನೆ ನಡೆಸುವುದರೊಂದಿಗೆ ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ ಜಾನುವಾರುಗಳ ಸಹಿತ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ರಿಪ್ಪನ್‌ಪೇಟೆಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

Read More : Bangalore ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ, ಚಿಕೂನ್‌ಗುನ್ಯಾ ; ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಪ್ರಕರಣಗಳಿವೆ ?

ಅಕ್ರಮವಾಗಿ ಮೂರು ಜಾನುವಾರುಗಳನ್ನು ಟಾಟಾ ದೋಸ್ತ್ (ಕೆಎ 37ಎ2314) ವಾಹನದಲ್ಲಿ ಸಾಗಿಸುತ್ತಿದ್ದ ಆರೋಪಿಗಳಾದ ಆಯನೂರು ಸಮೀಪದ ಹಾರನಹಳ್ಳಿ ವಾಸಿಗಳಾದ ಸೈಯದ್ ಖೈಜರ್ (45), ರಾಹಿದ್ (18) ಮತ್ತು ಫಾಜಿಲ್ (48) ಎಂಬ ಮೂವರು ಆರೋಪಿಗಳನ್ನು ಬಂಧಿಸಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವೀಣ್ ಮತ್ತು ಸಿಬ್ಬಂದಿವರ್ಗ ಹಾಜರಿದ್ದರು.


ಅಕ್ರಮ ಮದ್ಯ ಮಾರಾಟ, ಓರ್ವನ ಬಂಧನ !

Ripponpete | ಹುಂಚ ಗ್ರಾಮದ ಬಿ.ಕೆ.ಬಿ.ಸರ್ಕಲ್‌ನ ಕಿರಾಣಿ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯನ್ನಾದರಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಮತ್ತು ಸಿಬ್ಬಂದಿವರ್ಗ ದಾಳಿ ನಡೆಸಿ ಪತ್ತೆ ಮಾಡುವ ಮೂಲಕ ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯದ ಪೌಚುಗಳ ಸಮೇತ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More: Bakrid 2024 | ಸೌಹಾರ್ಧಯುತವಾಗಿ ಬಕ್ರೀದ್ ಹಬ್ಬ ಆಚರಿಸಲು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಮನವಿ

Leave a Comment