Crime News

ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಪತಿ ಶವ ನದಿಯಲ್ಲಿ ಪತ್ತೆ !

RIPPONPETE ; ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನದಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪದ ಸದಾನಂದ ಭಟ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಂತರ ಪಟಗುಪ್ಪ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ವಿವರ :

ಸುರುಳಿಕೊಪ್ಪ ಗ್ರಾಮದ ಸದಾನಂದ ಭಟ್ ಮತ್ತು ಆತನ ಪತ್ನಿ ಸಬೀತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಪತ್ನಿ ಸಬೀತಾ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದಾರೆ. ಆಕೆ ಬದುಕುವುದು ಕಷ್ಟ ಎಂದು ತಿಳಿದು ಹೆದರಿದ ಸದಾನಂದ ಭಟ್ ತನ್ನ ಕಾರನ್ನು ಚಲಾಯಿಸಿಕೊಂಡು ಹೋಗಿ ಸೇತುವೆ ಮೇಲೆ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದನು.

ಗಾಯಗೊಂಡ ಸಬೀತಾ ರವರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ಪಟಗುಪ್ಪ ಸೇತುವೆ

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ರಿಪ್ಪನ್‌ಪೇಟೆ ಪೊಲೀಸರು ಆರೋಪಿ ಸದಾನಂದ ಭಟ್ ಶೋಧ ನಡೆಸಿದ್ದಾರೆ ಆದರೆ ಆರೋಪಿಯ ಕಾರು ಪಟಗುಪ್ಪ ಸೇತುವೆ ಬಳಿ ದೊರಕಿದ್ದು ಯಾವುದೇ ಸುಳಿವು ಸಿಕ್ಕಿರಲಿಲ್ಲ ನಂತರ ಕಾರನ್ನು ಹೊಸನಗರ ಪೊಲೀಸರು ವಶಪಡಿಸಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ ಆರೋಪಿ ಸದಾನಂದ ಭಟ್ ಮೃತದೇಹ ಪಟಗುಪ್ಪ ಸೇತುವೆ ಬಳಿಯಲ್ಲಿ ಪತ್ತೆಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ಹಾಗೂ ಹೊಸನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>