ಹೊಸನಗರ

ರಿಪ್ಪನ್‌ಪೇಟೆಯಲ್ಲಿ ಡಾ. ಪುನೀತ್‌ ರಾಜ್‌ಕುಮಾರ್ ಪುಣ್ಯಸ್ಮರಣೆ

ರಿಪ್ಪನ್‌ಪೇಟೆ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ಅಭಿಮಾನಿ ಬಳಗದ ವತಿಯಿಂದ ‘ಪವರ್ ಸ್ಟಾರ್’ ಡಾ. ಪುನೀತ್ ರಾಜ್‌ಕುಮಾರ್ 5ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.

Puneeth Rajkumar RPT

ರಿಪ್ಪನ್‌ಪೇಟೆ: ತಮ್ಮ ಅದ್ಭುತ ನಟನೆ, ಸರಳ ವ್ಯಕ್ತಿತ್ವ ಹಾಗೂ ಹೃದಯ ಶ್ರೀಮಂತಿಕೆಯ ಮೂಲಕ ‘ಪವರ್ ಸ್ಟಾರ್’ ಡಾ. ಪುನೀತ್ ರಾಜ್‌ಕುಮಾರ್ ಇಂದಿಗೂ ಕೋಟ್ಯಂತರ ಕನ್ನಡಿಗರ ಹೃದಯದಲ್ಲಿ ಜೀವಂತವಾಗಿದ್ದಾರೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಉಪನಿರೀಕ್ಷಕ (ಪಿಎಸ್‌ಐ) ರಾಜುರೆಡ್ಡಿ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ 5ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಪ್ಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

“ಪುನೀತ್ ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಷ್ಟೇ ಅಲ್ಲದೆ, ಪ್ರಚಾರ ಬಯಸದೆ ನಿರಂತರ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದರು. ಅವರ ಉದಾರ ಗುಣ, ಸಾಮಾಜಿಕ ಕಳಕಳಿ ಹಾಗೂ ಸಹಾಯ ಮಾಡುವ ಮನೋಭಾವ ಎಲ್ಲರಿಗೂ ಮಾದರಿ,” ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಕೆರೆಹಳ್ಳಿ ದೇವರಾಜ್ ಮಾತನಾಡಿ, “ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ ಕನ್ನಡಿಗರ ಮನೆಮಾತಾದ ಅಪ್ಪು, ಅಪ್ರತಿಮ ಪ್ರತಿಭೆ ಮತ್ತು ಸರಳತೆಯಿಂದ ಪ್ರತಿಯೊಬ್ಬರ ಹೃದಯದಲ್ಲೂ ಭದ್ರ ಸ್ಥಾನ ಪಡೆದಿದ್ದಾರೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿದ್ದ ಅಪ್ಪು, ನಾಡು ಕಂಡ ಅಪರೂಪದ ಮಾನವತಾವಾದಿ,” ಎಂದರು.

ಈ ಸಂದರ್ಭದಲ್ಲಿ ಕಸ್ತೂರಿ ಕನ್ನಡ ಸಂಘದ ಸಂಸ್ಥಾಪಕ ಅಧ್ಯಕ್ಷ ಆರ್.ಎ. ಚಾಬುಸಾಬ್, ಪ್ರಮುಖರಾದ ಆರ್.ಡಿ. ಶೀಲಾ, ಆಸಿಫ್ ಭಾಷಾ, ನಿರೂಪ್ ಕುಮಾರ್, ದೀಪಾ ನಾಗರಾಜ್, ಆರ್. ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ನಿರಂಜನ್, ಎನ್. ವರ್ತೇಶ್ ಸೇರಿದಂತೆ ಹಲವು ಅಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]