ಆನೆ ದಾಳಿ, ಮೃತ ವ್ಯಕ್ತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

Written by malnadtimes.com

Updated on:

RIPPONPETE | ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ರೈತ ತಿಮ್ಮಪ್ಪ ಕಳೆದ ಮೂರು ತಿಂಗಳ ಹಿಂದೆ ದರಗೆಲೆ ತರಲು ಕಾಡಿಗೆ ಹೋದಾಗ ಕಾಡಾನೆ ತುಳಿತಕ್ಕೆ ಒಳಗಾಗಿ ಮೃತಪಟ್ಟಿದ್ದರು.

WhatsApp Group Join Now
Telegram Group Join Now
Instagram Group Join Now

ಧರೆ ಕುಸಿತದಿಂದ ಸಂಪರ್ಕ ಕಡಿತಗೊಳ್ಳುವ ಆತಂಕ, ಘಟನಾ ಸ್ಥಳಕ್ಕೆ ಮಾಜಿ ಸಚಿವ ಕಿಮ್ಮನೆ ಭೇಟಿ, ಪರಿಶೀಲನೆ

ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಗುರುವಾರ ನೊಂದ ಕುಟುಂಬದವರ ಮನೆಗೆ ತೆರಳಿ ರಾಜ್ಯ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವನ್ಯ ಪ್ರಾಣಿಗಳು ಹಾಗೂ ಮಾನವ ನಡುವಿನ ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ವಿಶೇಷ ಕಾರ್ಯ ಯೋಜನೆಯನ್ನು ಹಮ್ಮಿಕೊಳ್ಳುವ ಅಗತ್ಯತೆ ಯಾವುದೇ ಸರ್ಕಾರವಿದ್ದರೂ ತುರ್ತಾಗಿ ಆಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ ಹಾಲೇಶ್, ಭೂ ಕಂದಾಯ ಇಲಾಖೆ ಅಧಿಕಾರಿಗಳು, ಡಿಎಫ್ಒ ಹನುಮಂತಪ್ಪ, ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತಿ ಜನಪ್ರತಿನಿಧಿಗಳು ಮತ್ತು ಬಸವಾಪುರ ಗ್ರಾಮಸ್ಥರು ಹಾಜರಿದ್ದರು.

ಅಬ್ಬರ ಮುಗಿಸಿದ ‘ಪುಷ್ಯ’, ಲಿಂಗನಮಕ್ಕಿ ಜಲಾಶಯ ಭರ್ತಿಗೆ 5 ಅಡಿ ನೀರು ಬಾಕಿ !

Leave a Comment