Ripponpete

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ದ್ವಿತೀಯ ಪಿಯುನಲ್ಲಿ ಶೇ.73 ಫಲಿತಾಂಶ

ರಿಪ್ಪನ್‌ಪೇಟೆ ; ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 73 ರಷ್ಟು ಫಲಿತಾಂಶ  ಬಂದಿದೆ ಎಂದು ಪ್ರಭಾರಿ ಪ್ರಾಚಾರ್ಯ ವಾಸುದೇವ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಕಾಲೇಜ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜ್‌ನಿಂದ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 249 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪಬ್ಲಿಕ್ ಪರೀಕ್ಷೆಗೆ ಕುಳಿತ್ತಿದ್ದು 180 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 73 ರಷ್ಟು ಫಲಿತಾಂಶ ಬಂದಿದೆ ಎಂದರು.

ಕಲಾ ವಿಭಾಗದಲ್ಲಿ ಶೇ. 77.33 ರಷ್ಟು  ಮತ್ತು ವಿಜ್ಞಾನ ವಿಭಾಗದಲ್ಲಿ ಶೇ. 67.50 ರಷ್ಟು  ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ. 73.40 ರಷ್ಟು ಫಲಿತಾಂಶ ಪಡೆಯುವುದರೊಂದಿಗೆ  ಕಲಾ ವಿಭಾಗದಲ್ಲಿ 3 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 7 ವಿದ್ಯಾರ್ಥಿ ಹಾಗೂ ವಾಣಿಜ್ಯ ವಿಭಾಗದಲ್ಲಿ 8 ವಿದ್ಯಾರ್ಥಿಗಳು ಆತ್ಯುತ್ತಮ   ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಕಾಲೇಜ್‌ನ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ  ಹೆಚ್ಚಿಸಿದ್ದಾರೆಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ವಿದ್ಯಾರ್ಥಿಗಳ ಈ ಸಾಧನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತು ಸಿಡಿಸಿ ಉಪಾಧ್ಯಕ್ಷ ಜಿ.ಆರ್.ಗೋಪಾಲಕೃಷ್ಣ ಮತ್ತು ಸಿಡಿಸಿ ಸಮಿತಿಯವರು, ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]