ಹೊಸನಗರ

ರಿಪ್ಪನ್‌ಪೇಟೆ ಹೈಸ್ಕೂಲ್ ಉಪ ಪ್ರಾಂಶುಪಾಲ ಕೆಸಿನಮನೆ ರತ್ನಾಕರ ಇನ್ನಿಲ್ಲ !

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲರು ಹಾಗೂ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಕೆಸಿನಮನೆ ರತ್ನಾಕರ ನಿಧನರಾಗಿದ್ದಾರೆ.

ಕೆಸಿನಮನೆ ರತ್ನಾಕರ ನಿಧನ Kesinamane Rathnakara

ಹೊಸನಗರ : ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲರು ಹಾಗೂ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ಕೆಸಿನಮನೆ ರತ್ನಾಕರ (58) ಅನಾರೋಗ್ಯದಿಂದಾಗಿ ಬುಧವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಮೂಲತಃ ಹೊಸನಗರ ತಾಲೂಕಿನ ನಗರ ಸಮೀಪದ ನಿಲ್ಸ್‌ಕಲ್‌ ಬಳಿಯ ಕೆಸಿನಮನೆ ಗ್ರಾಮದವರಾದ ಇವರು, ಶಿಕ್ಷಣ ರಂಗದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಕಳೆದ 2020ರಿಂದ ರಿಪ್ಪನ್‌ಪೇಟೆ ಸರ್ಕಾರಿ ಹೈಸ್ಕೂಲ್‌ನಲ್ಲಿ ಉಪ ಪ್ರಾಂಶುಪಾಲರಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದರು.

2024ರಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿದ್ದ ರತ್ನಾಕರ, ಚಿಕಿತ್ಸೆ ಪಡೆದು ಗುಣಮುಖರಾಗಿ ಮರಳಿ ಶಾಲೆಗೆ ಹಾಜರಾಗಿದ್ದರು. ಆದರೆ ಇತ್ತೀಚಿನ ಕೆಲ ತಿಂಗಳುಗಳಿಂದ ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಮನೆಯಲ್ಲೇ ಆರೈಕೆ ಪಡೆಯುತ್ತಿದ್ದರು. ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಬುಧವಾರ ಸಂಜೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಶಿಕ್ಷಣದ ಜೊತೆಗೆ ಸಾಹಿತ್ಯ ವಲಯದಲ್ಲೂ ಅಪಾರ ಒಲವು ಹೊಂದಿದ್ದ ಇವರು, ಹೊಸನಗರ ತಾಲೂಕು ಕಸಾಪ ಅಧ್ಯಕ್ಷರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು. ತಮ್ಮ ಸರಳ ವ್ಯಕ್ತಿತ್ವದ ಮೂಲಕ ವಿದ್ಯಾರ್ಥಿಗಳು, ಸಹೋದ್ಯೋಗಿಗಳು, ಸಾರ್ವಜನಿಕರು ಹಾಗೂ ಸಾಹಿತ್ಯ ಪ್ರೇಮಿಗಳೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು-ಮಿತ್ರರು ಮತ್ತು ಹಿತೈಷಿಗಳನ್ನು ಅಗಲಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!