RIPPONPETE ; ಇಲ್ಲಿನ ಕಸ್ತೂರಿ ಕನ್ನಡ ಸಂಘದ 4ನೇ ವರ್ಷದ ವಾರ್ಷಿಕೋತ್ಸವ ಮತ್ತು ಡಾ.ಪುನಿತ್ ಅಭಿಮಾನಿ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರದ ಭವ್ಯ ಮೆರವಣಿಗೆ ಜರುಗಿತು.
ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರದ ಭವ್ಯ ಮೆರವಣಿಗೆಗೆ ಪಿಎಸ್‌ಐ ಎಸ್.ಪಿ. ಪ್ರವೀಣ್‌ಕುಮಾರ್ ಕನ್ನಡ ಧ್ವಜವನ್ನು ಎತ್ತಿ ಹಿಡಿಯುವ ಮೂಲಕ ಚಾಲನೆ ನೀಡಿದರು. ನಂತರ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳ ಕಲಾ ಪ್ರದರ್ಶನ ಮತ್ತು ಅಂಗನವಾಡಿ ಮತ್ತು ಪ್ರಾಥಮಿಕ ಶಾಲಾ ಮಕ್ಕಳ ವಿವಿಧ ವೇಷ ಭೂಷಣದೊಂದಿಗೆ ಶಾಲಾ-ಕಾಲೇಜ್ ವಿದ್ಯಾರ್ಥಿಗಳ ಮುಗಿಲು ಮುಟ್ಟುವ ಕನ್ನಡ ಜಯಘೋಷಣೆಯ ಮಧ್ಯ ಕನ್ನಡ ನುಡಿ ಜಾತ್ರೆ ಸಾರ್ವಜನಿಕರನ್ನು ಪುಳಕಿತರನ್ನಾಗಿಸಿತು.
ನಂತರ ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಭಾ ಕಾರ್ಯಕ್ರಮ ಜರುಗಿತು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ಮತ್ತು ಹಿರಿಯ ಸಾಹಿತಿ ನಿವೃತ್ತ ಪೊಲೀಸ್ ಅಧಿಕಾರಿ ಹ.ಆ.ಪಾಟೀಲ ಉದ್ಘಾಟಿಸಿ ಮಾತನಾಡಿ, ಕನ್ನಡ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗದೆ ನಿತ್ಯ ಭಾಷೆಯಾಗಬೇಕು. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ, ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ ಕನ್ನಡೇತರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಿ ಎಂದು ಹೇಳಿ, ಅವರು ನೆಲ ಜಲ ಗಡಿ ನಾಡ ರಕ್ಷಣೆ ವಿಚಾರದಲ್ಲಿ ನಾವು ಸಂಘಟಿತರಾಗುವ ಮೂಲಕ ಭಾಷೆಯ ಕನ್ನಡವೇ ನಮ್ಮ ಮನಸ್ಸಿನ ಭಾಷೆಯನ್ನು ನಾವು ಉಳಿಸಿಕೊಂಡು ಹೋಗಬೇಕು ಎಂದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಹಾಗೂ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಪಿಯು ಕಾಲೇಜ್‌ನ ಪ್ರಾಚಾರ್ಯ ವಾಸುದೇವ ಇವರನ್ನು ಸನ್ಮಾನಿಸಿದರು.
ಮುಖ್ಯ ಆತಿಥಿಗಳಾಗಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಬಾಳೂರು ಗ್ರಾಮ ಪಂಚಾಯಿತ್ ಅಧ್ಯಕ್ಷ ಶ್ರೀನಿವಾಸ ಆಚಾರ್, ಚಿಕ್ಕಜೇನಿ ಗ್ರಾಮ ಪಂಚಾಯಿತ್ ಅಧ್ಯಕ್ಷ ಎನ್.ಪಿ.ರಾಜು, ಕೆಂಚನಾಲ ಗ್ರಾಮ ಪಂಚಾಯಿತ್ ಅಧ್ಯಕ್ಷ ಉಭೇದುಲ್ಲಾ ಷರೀಫ್, ಅರಸಾಳು ಗ್ರಾಮ ಪಂಚಾಯಿತ್ ಅಧ್ಯಕ್ಷೆ ಜಯಮ್ಮ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ಸದಸ್ಯ ಎನ್.ಚಂದ್ರೇಶ್, ಬೆಳ್ಳೂರು ಗ್ರಾಮ ಪಂಚಾಯಿತ್ ಅಧ್ಯಕ್ಷ ವಿನಂತಿ ರಾಘವೇಂದ್ರ, ನಾಡಕಛೇರಿ ಉಪತಹಶೀಲ್ದಾರ್ ಗೌತಮ್, ನರಸಿಂಹ, ಮಂಜುನಾಥ ಕಾಮತ್, ಚಾಬುಸಾಬ್, ಜಿ.ಎಸ್.ವರದರಾಜ್, ಎನ್.ವರ್ತೇಶ್,
ಬಿ.ಮಂಜಪ್ಪ, ಎಂ.ಬಿ.ಮಂಜುನಾಥ, ಆರ್.ಈ.ಈಶ್ವರಶೆಟ್ಟಿ, ಎನ್.ಸತೀಶ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಕಸ್ತೂರಿ ಕನ್ನಡ ಸಂಘದ ಪದಾಧಿಕಾರಿಗಳು ಹಾಗೂ ಪುನೀತ್ ರಾಜ್ ಬಳಗದ ಪದಾಧಿಕಾರಿಗಳು ಹಾಜರಿದ್ದರು. ಮೇಘನಾ ಸ್ವಾಗತಿಸಿದರು.