ರಿಪ್ಪನ್‌ಪೇಟೆ ; ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು.
ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಎರಡು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ನೂರಾರು ಮುಸ್ಲಿಂ ಬಾಂಧವರು ಹೊಸನಗರ ರಸ್ತೆಯ ಮಸೀದಿಯಿಂದ ಮೆರವಣಿಗೆ ಹೊರಟು ವಿನಾಯಕ ವೃತ್ತದವರಗೆ ಬಂದು ಸಭೆ ನಡೆಸಿ ತಕ್ಷಣ ಇಂತಹ ಹೀನ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಧರ್ಮದ ಹೆಸರು ಕೇಳಿ ನರಮೇಧ ನಡೆಸಿದ ಕೃತ್ಯದಿಂದಾಗಿ ಮುಸ್ಲಿಂ ಸಮಾಜ ತಲೆ ಎತ್ತದಂತೆ ಮಾಡಿದ್ದಾರೆಂದು ಹೇಳಿ, ಇಂತಹ ಹೀನಕೃತ್ಯ ಎಸಗಿವರನ್ನು ಜೀವಂತ ಉಳಿಸಬಾರದು ಅವರಿಗೂ ಇಂತಹದೇ ಶಿಕ್ಷೆಯಾಗಬೇಕು ಎಂದು ಸಮಾಜದ ಮುಖಂಡ ಆರ್.ಎ.ಚಾಬುಸಾಬ್ ಹೇಳಿದರು.

ಭಾರತ ದೇಶ ಶಾಂತಿ ಸೌಹಾರ್ದತೆಯ ದೇಶ ನಾವುಗಳಲ್ಲಾ ಶಾಂತಿ ಸೌಹಾರ್ದತೆಯಿಂದ ಯಾವುದೇ ಜಾತಿ ಭೇದ-ಭಾವನೆಯಿಲ್ಲದೆ ಭಾವೈಕ್ಯತೆಯಿಂದ ನಡೆದುಕೊಂಡು ಬರುತ್ತಿದ್ದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನರಮೇಧ ಎಸಗುವ ಮೂಲಕ ಸಮಾಜ ತಲೆ ತಗ್ಗಿಸುವಂತೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಅಮೀರ್ ಹಂಜಾ ಹೇಳಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಶಖಾಫಿ, ಜುಮ್ಮಾ ಮಸೀದಿ ಅಧ್ಯಕ್ಷ ಹಸನಬ, ಆಸಿಫ್‌ಭಾಷಾ, ಖಲೀಲ್‌ಷರೀಫ್, ನಿಸಾರ್‌ಸುಮಯ್ಯ, ಅಜಾದ್, ಮೆಕ್ಕಾ ಮಸೀದಿ ಧರ್ಮಗುರುಗಳು ಹಾಗೂ ಮುಸ್ಲಿಂ ಸಮಾಜದ ಇನ್ನಿತರರು ಹಾಜರಿದ್ದರು.