ರಿಪ್ಪನ್‌ಪೇಟೆ : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕೇಂದ್ರ ಕಾರ್ಯಕಾರಣಿ ಸಮಿತಿಗೆ ನೂತನ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ರಿಪ್ಪನ್‌ಪೇಟೆ ಪದ್ಮಾ ಸುರೇಶ್ ಅವರನ್ನು ನೇಮಕ ಮಾಡಲಾಗಿದೆ.
ಬ್ರಹ್ಮಣ ಮಹಾಸಭಾದ ಅಧ್ಯಕ್ಷ ಎಚ್ ಪಿ ಸುರೇಶ್ ಅವರು ಈ ಕುರಿತು ಪ್ರಕಟಣೆ ನೀಡಿದ್ದು, ಬ್ರಾಹ್ಮಣ ಸಮುದಾಯಕ್ಕಾಗಿ ನಿರಂತರವಾಗಿ ಸೇವೆ ಸಲ್ಲಿಸಿರುವ ಪದ್ಮಾ ಸುರೇಶ್ ಅವರ ನಿಷ್ಠೆ ಮತ್ತು ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪದ್ಮಾ ಸುರೇಶ್ ಅವರು ಹಿಂದೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ, ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಹಾಗೂ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸಮಾಜ ಸೇವೆ ನಡೆಸಿದ್ದಾರೆ. ಇವರ ಸೇವಾ ಚಟುವಟಿಕೆಗಳು ಮತ್ತು ಸಮುದಾಯಪರ ಶ್ರದ್ಧೆಯಿಂದಾಗಿ ಜನಾನುರಾಗಿಯಾಗಿರುವ ಅವರು, ಈ ಸ್ಥಾನಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಪಟ್ಟಣದ ಬ್ರಾಹ್ಮಣ ಸಮಾಜ ಸಮಿತಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.