ಮನೆಗಳ್ಳನ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ; ನಗ-ನಾಣ್ಯ ವಶಕ್ಕೆ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಕೋಟೆತಾರಿಗ ಗ್ರಾಮದಲ್ಲಿ ಮನೆ ಬೀಗ ಮುರಿದು ಕಳವು    ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ‌.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕೋಟೆತಾರಿಗ ಗ್ರಾಮದ ದಾನಮ್ಮ  ಎಂಬುವರ ಮನೆಯಲ್ಲಿ ಶುಕ್ರವಾರ ರಾತ್ರಿ ಬೀಗ ಮುರಿದು ಕಳವು ಮಾಡಲಾಗಿದೆ ಎಂದು ದೂರು ನೀಡಲಾಗಿದ್ದು ದೂರಿನನ್ವಯ ಪ್ರಕರಣ ದಾಖಲಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು.

ಪ್ರಕರಣ ನಡೆದು ನಾಲ್ಕು ದಿನಗಳೊಳಗೆ ಆರೋಪಿಯನ್ನು ಪತ್ತೆ ಮಾಡಿದ್ದಾರೆ. ಕಣಬಂದೂರು ಗ್ರಾಮದ ಸಂತೋಷ (37) ಬಂಧಿತ ಆರೋಪಿಯಾಗಿದ್ದು, ಈತನಿಂದ ಚಿನ್ನಾಭರಣ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ.

ತೀರ್ಥಹಳ್ಳಿ ಡಿವೈಎಸ್‌ಪಿ ಅರವಿಂದ ಕಲಗುಜ್ಜಿ ಮತ್ತು ಸಿಪಿಐ ಗುರಣ್ಣ ಹೆಬ್ಬಾಳ್ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ಪೊಲೀಸರು ತನಿಖೆ ಆರಂಭಿಸಿ ಸ್ಥಳೀಯ ಗುಪ್ತಚರ ಜಾಲದಿಂದ ಮಾಹಿತಿಯನ್ನಾದರಿಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ ನಾಲ್ಕೂವರೆ ಸಾವಿರ ನಗದು, 8.5 ಗ್ರಾಂ ಚಿನ್ನಾಭರಣ ಮತ್ತು 10 ಗ್ರಾಂ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

Leave a Comment