RIPPONPETE ; ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮಚಲಿಜಡ್ಡು – ಕಡೇಗದ್ದೆ ಸಂಪರ್ಕ ರಸ್ತೆ ಕೊಚ್ಚಿ ಹೋಗಿದ್ದು ಅಕ್ಕ-ಪಕ್ಕದ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಣದ ನಷ್ಟ ಸಂಭವಿಸಿದೆ.
ಸುದ್ದಿ ತಿಳಿದು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ಅತಿವೃಷ್ಠಿಯಿಂದ ಹಾನಿಗೊಳಗಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹಾನಿಗೀಡಾಗಿರುವ ಸಂಪರ್ಕ ರಸ್ತೆಯನ್ನು ಶೀಘ್ರ ದುರಸ್ಥಿಗೊಳಿಸಿಲು ಹಾಗೂ ಬೆಳೆ ನಷ್ಟಕ್ಕೆ ತುರ್ತು ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗಮನ ಸೆಳೆಯಲಾಗುವುದು ಎಂದರು.
ಈ ಸಂದರ್ಭದಲ್ಲಿ ಪಕ್ಷದ ತಾಲ್ಲೂಕು ಮುಖಂಡರು,ಗ್ರಾಮಸ್ಥರು ರೈತ ಮುಖಂಡರು ಹಾಜರಿದ್ದರು.
ಧಾರಾಕಾರ ಮಳೆಗೆ ಮನೆ ಕುಸಿದ ಮನೆ !
RIPPONPETE ; ಭಾರಿ ಮಳೆಗೆ ಸಮೀಪದ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸುರೇಶ ಎಂಬುವರ ವಾಸದ ಮನೆಯು ಕುಸಿದು ಅಪಾರ ಹಾನಿ ಸಂಭವಿಸಿದೆ.

ಸುದ್ದಿ ತಿಳಿದು ಇಂದು ಮುಂಜಾನೆಯೇ ಅಮೃತ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸಚಿನ್‌ಗೌಡ ಮತ್ತು ಪಂಚಾಯ್ತಿ ಸಿಬ್ಬಂದಿವರ್ಗ ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿ ತಕ್ಷಣ ಸರ್ಕಾರದಿಂದ ಪರಿಹಾರ ಕೊಡಿಸುವ ಬಗ್ಗೆ ಭರವಸೆ ನೀಡಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.