ಶಿವಮೊಗ್ಗ

ಅಂತರರಾಷ್ಟ್ರೀಯ ಕರಾಟೆ : ರಿಪ್ಪನ್‌ಪೇಟೆಯ ಅಪೇಕ್ಷಾಗೆ ದ್ವಿತೀಯ ಸ್ಥಾನ

InShot 20260824 081402000

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ 7ನೇ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಿಪ್ಪನ್‌ಪೇಟೆಯ ವಿದ್ಯಾಸಂಘ ಶಿಶುಮಂದಿರದ ಲೋಕಲ್ ಕರಾಟೆ ತರಗತಿಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

WhatsApp Group Join Now
Telegram Group Join Now
Instagram Group Join Now

​ಸ್ಪರ್ಧೆಯ ‘ಕಟಾ’ ವಿಭಾಗದಲ್ಲಿ ಭಾಗವಹಿಸಿದ್ದ ಕರಾಟೆ ಪಟುಗಳಾದ ಸರ್ಕಾರಿ ಪ್ರೌಢ ಶಾಲೆ ಹುಂಚದಕಟ್ಟೆ 9ನೇ ತರಗತಿ ವಿದ್ಯಾರ್ಥಿನಿ ಅಪೇಕ್ಷಾ ದ್ವಿತೀಯ ಸ್ಥಾನ ಗಳಿಸುವ ಮೂಲಕ ರನ್ನರ್ ಅಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅತ್ಯಂತ ಸವಾಲಿನಿಂದ ಕೂಡಿದ್ದ ಈ ಅಂತರರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಅದ್ಭುತ ಕೌಶಲ ಪ್ರದರ್ಶಿಸಿದ ಈ ಇಬ್ಬರು ವಿದ್ಯಾರ್ಥಿಗಳು, ತಮ್ಮ ಕರಾಟೆ ತರಗತಿಗೆ, ಹೆತ್ತ ಪೋಷಕರಿಗೆ ಹಾಗೂ ರಿಪ್ಪನ್‌ಪೇಟೆ ಊರಿಗೆ ಕೀರ್ತಿ ತಂದಿದ್ದಾರೆ.

​ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಹೊಸನಗರ ತಾಲೂಕು ಕರಾಟೆ ಶಿಕ್ಷಕರ ಸಂಘ (ರಿ) ಹಾಗೂ ಐ ಕಿ ಸ್ಕೂಲ್ ಆಫ್ ಮಾರ್ಷಲ್ ಆರ್ಟ್ಸ್ ಇಂಡಿಯಾ ಅಭಿನಂದನೆಗಳನ್ನು ಸಲ್ಲಿಸಿದೆ.

​ಇದೇ ವೇಳೆ, ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರ ಸಾಧನೆಯ ಬೆನ್ನಲುಬಾಗಿ ನಿಂತು ಪ್ರೋತ್ಸಾಹಿಸಿದ ಪೋಷಕರಿಗೂ ಸಂಸ್ಥೆಯು ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದು, ಮುಂದೆಯೂ ಇದೇ ರೀತಿಯ ಸಹಕಾರ ಮತ್ತು ಬೆಂಬಲ ಮುಂದುವರಿಯಲಿ ಎಂದು ಆಶಿಸಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]