ತೀರ್ಥಹಳ್ಳಿ ; ಮಲೆನಾಡಿನಾದ್ಯಂತ ಪುಷ್ಯ ಮಳೆಯ ಆರ್ಭಟಕ್ಕೆ ಜೋರಾಗಿದ್ದು ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿದೆ. ಪರಿಣಾಮ ಶೃಂಗೇರಿ-ಹೊಸಗದ್ದೆ- ಕುಂದಾದ್ರಿ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ವರದಿಯಾಗಿದೆ.
ಹೊನ್ನೆತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಬಳ ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು ಸಂಪರ್ಕ ಕಡಿತಗೊಂಡಿದೆ.
ಶೃಂಗೇರಿಯಿಂದ ಕುಂದಾದ್ರಿ ಹಾಗೂ ಗುಡ್ಡೇಕೇರಿಗೆ ಬರುವ ಪ್ರವಾಸಿಗರು ಬದಲಿ ಮಾರ್ಗದಲ್ಲಿ ಸಂಚರಿಸಬೇಕಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

