ಅಪರಾಧ ಸುದ್ದಿ

37 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಡಕಾಯಿತಿ ಪ್ರಕರಣದ ಆರೋಪಿ ಅರೆಸ್ಟ್

InShot 20260731 072401751

ಶಿವಮೊಗ್ಗ : 1989ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆ ಗ್ರಾಮದ ಗುಡ್ಡೆಕೊಪ್ಪದಲ್ಲಿ ನಡೆದ ಡಕಾಯಿತಿ ಪ್ರಕರಣದ ಆರೋಪಿಯನ್ನು ಮಾಳೂರು ಪೊಲೀಸ್ ಠಾಣೆ ಸಿಬ್ಬಂದಿಗಳು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

1989ರಲ್ಲಿ ನಡೆದ ಈ ಡಕಾಯಿತಿ ಪ್ರಕರಣದ ಆರೋಪಿ ಮಂಗಳೂರಿನ ಅಬ್ದುಲ್ ಖಾದರ್ ಅಲಿಯಾಸ್ ಮೊಣು (57) ಘಟನೆ ನಂತರದಿಂದ ಇವನು ಬರೋಬ್ಬರಿ 37 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಪೊಲೀಸರು ಕೇರಳದ ಮಂಜೇಶ್ವರ ತಾಲ್ಲೂಕಿನ ವರ್ಕಾಡಿ ಗ್ರಾಮದ ಪುರ ಸಂಗೋಡಿ, ಪಾಡಿ ಎಂಬ ಪ್ರದೇಶದಲ್ಲಿ ಈತ ವಾಸವಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ, ಅಲ್ಲಿಗೆ ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಆರೋಪಿಯನ್ನು ಶಿವಮೊಗ್ಗ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈ ಪತ್ತೆ ಕಾರ್ಯದಲ್ಲಿ ಶಿವಮೊಗ್ಗ ಎಸ್ಪಿ ನಿಖಿಲ್ ಬಿ, ಎಎಸ್ಪಿ ಕಾರ್ಯಪ್ಪ ಎಜಿ, ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ ಕಲಗುಚ್ಚಿ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಸಿಪಿಐ ರಾಜಶೇಖರ್ ಹಾಗೂ ಮಾಳೂರು ಪೊಲೀಸ್ ಠಾಣೆ ಪಿಎಸ್ಐ ಸುನಿಲ್ ಬಿ.ಸಿ. ನಿರ್ದೇಶನದಲ್ಲಿ ಠಾಣೆ ಸಿಬ್ಬಂದಿಗಳಾದ ಮೇಘರಾಜ್ ಮತ್ತು ಅಭಿಲಾಶ ಪಾಲ್ಗೊಂಡಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]