ರಿಪ್ಪನ್‌ಪೇಟೆ: ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ ಮೇಲ್ಚಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳರು, ನಗದು ಹಾಗೂ ಬೆಳ್ಳಿ ವಸ್ತುಗಳನ್ನು ದೋಚಿರುವ ಘಟನೆ ತಳಲೆ ಗ್ರಾಮದಲ್ಲಿ ನಡೆದಿದೆ.
ಅಂಗನವಾಡಿ ಕಾರ್ಯಕರ್ತೆಯಾಗಿರುವ ವನಜಾ ಎಂಬುವವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ತಮ್ಮ ತೋಟದಲ್ಲಿನ ಅಡಿಕೆ ಗೊನೆ ತೆಗೆದ ನಂತರ ವನಜಾ ಅವರು ತಮ್ಮ ಸಹೋದರಿಯ ಮನೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ಕಳ್ಳರು ಮನೆಯ ಹೆಂಚು ಕಿತ್ತು ಒಳಗಿಳಿದು, ಬೀರುವಿನಲ್ಲಿಟ್ಟಿದ್ದ ಹಣ ಹಾಗೂ ಬೆಳ್ಳಿ ಗೆಜ್ಜೆಗಳನ್ನು ಕಳವು ಮಾಡಿದ್ದಾರೆ.
ಈ ಕುರಿತು ವನಜಾ ನೀಡಿದ ದೂರಿನ ಮೇರೆಗೆ ರಿಪ್ಪನ್‌ಪೇಟೆ ಠಾಣಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

