ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬ್ಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು, ಕೇಳದೇ ಇದ್ದಾಗ ಪಿಎಸ್‌ಐ ಕೃಷ್ಣ, ರೌಡಿಶೀಟರ್ ಗುಂಡನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ. ಗುಂಡ ಅಲಿಯಾಸ್ ರವಿ ಮೇಲೆ ನಾಲ್ಕು ಪ್ರಕರಣಗಳು ಇವೆ. ಗಾಯಗೊಂಡ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ರೌಡಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.