RIPPONPETE ; ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು. ಇವರುಗಳಿಗೆ ಪ್ರತಿಭೆ ಇದೆ ಅವಕಾಶಗಳಿಲ್ಲ. ಇವರುಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಕುರಿತು ಅರಿವು ಮೂಡಿಸಿದರೆ ಉನ್ನತ ಹಂತದ ಶಿಕ್ಷಣವನ್ನು ಪಡೆದು ಸಮಾಜದ ಮುಖ್ಯ ವಾಹಿನಿಗೆ ಬಂದು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಪಟ್ಟಣದ ಶಾರದಾ ರಾಮಕೃಷ್ಣ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಶಿಕ್ಷಕರು ಹಾಗೂ ಪೋಷಕರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದರ ಮೂಲಕ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಮೊದಲ ಆದ್ಯತೆಯನ್ನು ನೀಡುತ್ತಿದ್ದಾರೆ. ಮಕ್ಕಳಿಗೆ ಶಿಕ್ಷಣದ ಚಟುವಟಿಕೆಗಳು ಹಾಗೂ ಕ್ರೀಡಾಕೂಟದ ಬಗ್ಗೆ ಆಸಕ್ತಿಯನ್ನು ಮೂಡಿಸಬೇಕು. ಇಂದಿನ ಮಕ್ಕಳು ಮಾನಸಿಕವಾಗಿ ದೈಹಿಕವಾಗಿ ದೃಢತೆಯನ್ನು ಹೊಂದಬೇಕಾದರೆ ಪುಟಾಣಿ ಮಕ್ಕಳ ಕ್ರೀಡಾ ಚಟುವಟಿಕೆಗಳ ಬಗ್ಗೆ ಆಸಕ್ತಿಯನ್ನು ಮೂಡಿಸಬೇಕು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಇಂದು ಬಡ ಹಾಗೂ ಶ್ರೀಮಂತರು ಎಂಬ ಭೇದಭಾವವಿಲ್ಲದೆ ಉತ್ತಮ ಶಿಕ್ಷಣದ ಸೌಲಭ್ಯ ದೊರೆಯುತ್ತಿದೆ. ಎಲ್ಲಾ ಪೋಷಕರು ಹಾಗೂ ಸಮಾಜದಲ್ಲಿ ನಾನ್ ನಾಗರಿಕರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಕಾರ್ಯಕ್ರಮದ ಸಾನಿಧ್ಯವನ್ನು ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು.

ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್, ಹೊಸನಗರ ತಾಲೂಕು ಶಿಕ್ಷಕರ ಸಂಘದ ಉಪಾಧ್ಯಕ್ಷ ಶಿವಮೂರ್ತಿ ಬೆಳ್ಳೂರು, ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಅಧ್ಯಕ್ಷ ದೇವರಾಜ್, ಕಾರ್ಯದರ್ಶಿ ಸರಿತಾ ದೇವರಾಜ್, ಪಿಎಸ್ಐ ಪ್ರವೀಣ್ ಕುಮಾರ್ ಎಸ್ ಪಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಇನ್ನಿತರರು ಇದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.