ಸಾಗರ: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟ ಘಟನೆ ಸಾಗರ ತಾಲೂಕಿನ ನೆಲ್ಲಿಬೀಡು ವೃತ್ತದ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಕರೂರು ಹೋಬಳಿಯ ಮಳೂರು ಗ್ರಾಮದ ನೀಲಕುಮಾರ್ ಜೈನ್ ಅವರ ಪುತ್ರಿ ಅರ್ಚನಾ ಎಂದು ಗುರುತಿಸಲಾಗಿದೆ.
ತಂದೆ ಮತ್ತು ಮಗಳು ಎಂದಿನಂತೆ ದ್ವಿಚಕ್ರ ವಾಹನದಲ್ಲಿ ನೆಲ್ಲಿಬೀಡು ವೃತ್ತದ ರಸ್ತೆಯಾಗಿ ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅದೇ ಮಾರ್ಗದಲ್ಲಿ ಎದುರಿನಿಂದ ಬಂದ ಮರಳು ತುಂಬಿದ ಟಿಪ್ಪರ್ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಲೇಖನವನ್ನು ಮುಂದುವರಿಸಿ ಓದಿ
ಡಿಕ್ಕಿಯ ಪರಿಣಾಮವಾಗಿ ಅರ್ಚನಾ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ನಡೆಯುತ್ತಿದೆ.

